ತುಮಕೂರು: ವೈದ್ಯರು ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು, ಇತ್ತೀಚಿನ ದಿನಗಳಲ್ಲಿ ವೈದ್ಯರಿಗೆ ಬೇಡಿಕೆ ಹೆಚ್ಚಾಗಿದೆ, ವೈದ್ಯಕೀಯ ವಿದ್ಯಾರ್ಥಿಗಳು ತಪಸ್ವಿನಂತೆ ಶ್ರದ್ಧೆ, ನಿಷ್ಟೆಯಿಂದ ಕಲಿತರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಿಂದ ೨೦೨೧-೨೨ ನೇ ಸಾಲಿನ ಪ್ರಥಮ ವರ್ಷದ ನೂತನ ಎಂಬಿಬಿಎಸ್, ಎಂಡಿ ಮತ್ತು ಎಂಎಸ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಸಮಾರಂಭದಲ್ಲಿ ಮಾತನಾಡಿ, ರಾತ್ರಿ, ಹಗಲು ಎನ್ನದೇ ಯಾವುದೇ ಸಮಯವಾದರೂ ರೋಗಿಗಳ ಚಿಕಿತ್ಸೆಗೆ ಸದಾ ಸಿದ್ಧರಿರಬೇಕು ಮತ್ತು ಯಾವಾಗಲೂ ರೋಗಿಗಳನ್ನು ಸೇವಾ ಮನೋ`Áವದಿಂದ ನೋಡಬೇಕು, ರೋಗಿ ಮತ್ತು ವೈದ್ಯರ ಭಾಂದವ್ಯ ಚೆನ್ನಾಗಿದ್ದರೆ ರೋಗಿ ಬೇಗ ಗುಣಮುಖನಾಗುತ್ತಾನೆ ಎಂದರು.
ಮುಖ್ಯಅತಿಥಿಗಳಾಗಿದ್ದ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಡಾ.ಎಂ.ದಯಾನಂದ್ ಮಾತನಾಡಿ, ವೈದ್ಯಕೀಯ ವೃತ್ತಿ ಜಗತ್ತಿನಾದ್ಯಂತ ತಲೆ ಎತ್ತಿ ನೋಡುವಂತಹ ಮಹತ್ತರ ವೃತ್ತಿಯೆಂದು ಭವಿಸಲಾಗುತ್ತದೆ, ಇದರ ಪೂರ್ವಭವಿ ಸಿದ್ಧತೆಯಾಗಿ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಅವಧಿಯಲ್ಲಿ ಸಮಯ ಪರಿಪಾಲನೆ, ಕಾರ್ಯತತ್ಪರತೆ ಮತ್ತು ಜನರ ನೋವಿಗೆ ಸ್ಪಂದಿಸುವ ಮನೋಭಾವನೆ ಬೆಳೆಸಿಕೊಂಡು ಒಂದು ಉತ್ತಮ ಆರೋಗ್ಯಕರ ಸಮಾಜದ ಕಲ್ಪನೆ ಸಾಕಾರಗೊಳಿಸಬಹುದು ಎಂದು ತಿಳಿಸಿದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ರಮಣ್ ಎಂ. ಹುಲಿನಾಯ್ಕರ್ ಮಾತನಾಡಿ, ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಿನ ಅವಧಿ ಮತ್ತು ಸಮಯದ ಬಗ್ಗೆ ರೂಪರೇಷೆಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳ ಬೇಕು, ಗುರುವಿನಲ್ಲಿ ಭಕ್ತಿಯಿಟ್ಟು ವಿದ್ಯಾಭ್ಯಾಸ ಮಾಡಿದರೆ ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬಹುದು ಹಾಗೂ ಸ್ನಾತಕೋತ್ತರ ಪದವಿಗೆ ಉತ್ತಮ ಭವಿಷ್ಯವಿದೆ ಎಂದು ತಿಳಿಸಿದರು.
ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್ ಮಾತನಾಡಿ, ವೈದ್ಯಕೀಯ ಕ್ಷೇತ್ರ ಎಂಬುದು ಅತ್ತುತ್ಯಮ ಕ್ಷೇತ್ರವಾಗಿದೆ, ಎಂಬಿಬಿಎಸ್ ಪದವಿಯಲ್ಲಿ ಪ್ರಾಯೋಗಿಕವಾಗಿ ವ್ಯಾಸಂಗ ಮಾಡಿದ ವಿಷಯಗಳು ವೃತ್ತಿ ಬದುಕಿಗೆ ಬುನಾದಿಯಾಗಲಿದೆ ಎಂದು ತಿಳಿಸಿದರು.
ಶ್ರೀದೇವಿ ಸಂಸ್ಥೆಯು ಬೆಳೆದು ಬಂದ ದಾರಿ ಹಾಗೂ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರುವ ವಿವಿಧ ಶ್ರೀದೇವಿ ಶಿಕ್ಷಣ ಸಂಸ್ಥೆಯ ವಿವರಗಳನ್ನು ನೀಡುತ್ತಾ ಶಿಕ್ಷಣದ ಕ್ಷೇತ್ರದಲ್ಲಿ ಮತ್ತು ಆರೋಗ್ಯ ಸೇವೆಗಳಲ್ಲಿ ತುಮಕೂರಿನಲ್ಲಿ ಶ್ರೀದೇವಿ ಸಂಸ್ಥೆಯೂ ತನ್ನದೆ ಆದ ವಿಶಿಷ್ಟ ಛಾಪು ಹೊಂದಿರುತ್ತದೆ. ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರಪಂಚದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ, ಪ್ರತಿ ವರ್ಷ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳ ರ್ಯಾಂಕ್ ಪಡೆದು ಅತ್ಯುತ್ತಮ ಶ್ರೇಣಿಗಳಲ್ಲಿ ತೇರ್ಗಡೆ ಹೊಂದಿದ್ದು ಶ್ರೀದೇವಿ ಸಂಸ್ಥೆಗೆ ಗೌರವ ತಂದಿದ್ದಾರೆ ಎಂದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಡಿ.ಕೆ.ಮಹಾಬಲರಾಜು ಮಾತನಾಡಿ, ಪ್ರಾರಂಭಿಕ ಸ್ನಾತಕೋತ್ತರ ಪದವಿ ವೈದ್ಯಕೀಯ ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ, ನಿಯಮಗಳನ್ನು ಮನವರಿಕೆ ಮಾಡಿಕೊಟ್ಟರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ.ಡಿ.ಅನುಪಮ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಂಬಿಕಾ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವೈದ್ಯರು ಉತ್ತಮ ಸೇವಾಗುಣ ಬೆಳೆಸಿಕೊಳ್ಳಲಿ
Get real time updates directly on you device, subscribe now.
Next Post
Comments are closed.