ಬೇಸಿಗೆಯಲ್ಲಿ ಕುಡಿವ ನೀರಿಗೆ ಸಮಸ್ಯೆ ಆಗಬಾರದು

ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

169

Get real time updates directly on you device, subscribe now.

ತುಮಕೂರು: ಬೇಸಿಗೆ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸ`É ನಡೆಸಿ ಮಾತನಾಡಿ, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಗ್ರಾಮೀಣ ಪ್ರದೇಶಗಳಲ್ಲಿ ಆಯಾ ಪಿಡಿಒ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕಾಧಿಕಾರಿಗಳು ಮತ್ತು ನಗರ ಪ್ರದೇಶಗಳಲ್ಲಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರಲ್ಲದೆ, ಅಗತ್ಯಇರುವ ಕಡೆ ಕೊಳವೆಬಾವಿ ಕೊರೆಸುವುದು, ಪೈಪ್ ಲೈನ್ ಅಳವಡಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸರ್ಕಾರಿ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸುವಲ್ಲಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಅಭಿನಂದಿಸಿದರಲ್ಲದೆ, ಇನ್ನೂ ಉತ್ತಮ ರೀತಿಯಲ್ಲಿ ಸೇವೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಕೊರೊನಾ ನಿಯಂತ್ರಣಕ್ಕಾಗಿ 12-14 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಕೊರ್ಬಿವ್ಯಾಕ್ಸ್ ಲಸಿಕಾ ಕರಣವನ್ನು ಏಪ್ರಿಲ್ 10 ರೊಳಗೆ ಶೇ.100 ರಷ್ಟು ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಡಾ. ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಮೂರು ದಿನಗಳೊಳಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ ಕೋವಿಡ್ನಿಂದ ಮೃತಪಟ್ಟ ಕುಟುಂಬದವರಿಗೆ ನೀಡಲಾಗುವ ಪರಿಹಾರ ಧನಕ್ಕೆ ಸಂಬಂಧಿಸಿದಂತೆ ಈವರೆಗೂ 1129 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಈಗಾಗಲೇ ಅರ್ಹ ಕುಟುಂಬಗಳಿಗೆ ಡಿಬಿಟಿ ಹಾಗೂ ಚೆಕ್ ಮೂಲಕ ಪರಿಹಾರ ವಿತರಿಸಲಾಗಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿಮಾ ಮಾತನಾಡಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶ್ರಮದಾನ, ಹೆರಿಗೆ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ, ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು, ಬಯೋಮೆಡಿಕಲ್ ತ್ಯಾಜ್ಯ ವಿಲೇವಾರಿ ಮಾಡಲು ತಂಡ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಪೈಕಿ ಪಹಣಿ ಒಗ್ಗೂಡಿಸುವಿಕೆ, 3/9 ಮಿಸ್ ಮ್ಯಾಚ್, ಸ್ಮಶಾನ ಸೇರಿ ವಿವಿಧ ಉದ್ದೇಶಗಳಿಗೆ ಭೂಮಿ ಕಾಯ್ದಿರಿಸುವುದು, ನಾಡ ಕಚೇರಿ ಪರಿಶೀಲನೆ ಸೇರಿದಂತೆ ಇನ್ನಿತರ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ಪಾಲಿಕೆ ಆಯುಕ್ತೆ ರೇಣುಕಾ, ಡಿಎಚ್ಒ ಡಾ.ಎಂ.ಬಿ.ನಾಗೇಂದ್ರಪ್ಪ, ಆರ್ಸಿಎಚ್ ಅಧಿಕಾರಿ ಡಾ.ಕೇಶವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!