ತುಮಕೂರು: ಕ್ಷಯ ಮುಕ್ತ ಭಾರತಕ್ಕಾಗಿ ಪ್ರಧಾನಿಯವರು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಾವಗಡ, ಕೊರಟಗೆರೆ, ಗುಬ್ಬಿ, ಶಿರಾ, ತುಮಕೂರು ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ಎಲ್ಇಡಿ ವಾಹನದ ಮೂಲಕ ಕ್ಷಯ ರೋಗ ನಿರ್ಮೂಲನೆ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ತಮ್ಮ ಕಚೇರಿ ಮುಂಭಾಗದಲ್ಲಿ ಕ್ಷಯ ರೋಗ ನಿರ್ಮೂಲನೆ ಕುರಿತು ಅರಿವು ಮೂಡಿಸುವ ಎಲ್ಇಡಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಜಾತ್ರೆ, ಉತ್ಸವ ಸೇರಿದಂತೆ ಜನದಟ್ಟಣೆ ಇರುವ ಕಡೆ ವಾಹನ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಾಗುವುದೆಂದರು.
ದೇಶವನ್ನು 2025 ರೊಳಗಾಗಿ ಕ್ಷಯ ಮುಕ್ತ ಮಾಡುವ ಗುರಿ ಇರುವುದರಿಂದ ರೋಗ ಲಕ್ಷಣಗಳಾದ ಧೀರ್ಘಾವಧಿ ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಹಸಿವಾಗದೆ ಇರುವುದು, ಕಫದಲ್ಲಿ ರಕ್ತ ಬೀಳುವುದು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಬೇಕು ಎಂದರಲ್ಲದೆ ಕ್ಷಯ ರೋಗಕ್ಕೆ 6 ತಿಂಗಳು ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖವಾಗಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಬಿ.ನಾಗೇಂದ್ರಪ್ಪ, ಆರ್ಸಿಎಚ್ ಅಧಿಕಾರಿ ಡಾ.ಕೇಶವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮೋಹನ್ ದಾಸ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಸನತ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಕ್ಷಯ ರೋಗ ನಿರ್ಮೂಲನೆಗೆ ಅರಿವು ವಾಹನ
Get real time updates directly on you device, subscribe now.
Prev Post
Comments are closed.