ಡಾ.ಪರಮೇಶ್ವರ್ ಬದುಕಿನ `ಸವ್ಯಸಾಚಿ’

ಪ್ರೊ.ಮಾದೇವ್ ಭರಣಿ ಸಂಪಾದಿತ ಗ್ರಂಥ ಬಿಡುಗಡೆ ಏ.೧೦ಕ್ಕೆ

292

Get real time updates directly on you device, subscribe now.

ತುಮಕೂರು: ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟ, ಸಿದ್ಧಾರ್ಥ ನಗರ, ತುಮಕೂರು ವತಿಯಿಂದ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಮಾಜಿ ಉಪಮುಖ್ಯಮಂತ್ರಿ ಮತ್ತು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ ಅವರ ಕುರಿತ ಪ್ರೊ.ಮಾದೇವ್ ಭರಣಿ ಸಂಪಾದಿತ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ದಗೊಂಡಿದೆ.

ನಗರದ ಅಗಳಕೋಟೆಯ ಶ್ರೀಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಏ.೧೦ ರಂದು ಬೆಳಿಗ್ಗೆ ೧೦-೩೦ಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಕುರಿತ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದ ಅಧ್ಯಕ್ಷ ಡಾ.ಎಂ.ಜೆಡ್. ಕುರಿಯನ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಇಂಡೋ ಶ್ರೀಲಂಕಾ ಇಂಟರ್ ನ್ಯಾಷನಲ್ ಬುದ್ದಿಸ್ಟ್ ಅಸೋಸಿಯೇನ್ ಅಧ್ಯಕ್ಷ ಡಾ.ಕೆ.ಸಿರಿ ಸುಮೇಧ್ ಥೇರಾ ಉದ್ಘಾಟಿಸುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಪದ್ಮಶ್ರೀ ಡಾ.ಚಂದ್ರಶೇಖರ ಕಂಬಾರ ಅವರು `ಸವ್ಯಸಾಚಿ’ ಗೌರವ ಗ್ರಂಥವನ್ನು ಬಿಡುಗಡೆ ಮಾಡುವರು.
ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀವೀರೇಶಾನಂದ ಸರಸ್ವತಿ ಸ್ವಾಮೀಜಿ, ದಿಕ್ಸೂಚಿ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ವಹಿಸುವರು. ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮಾರುತಿ ಡಿ. ಮಾಲೆ, ಆಡಳಿತ ಮಂಡಳಿ ಸದಸ್ಯರಾದ ಕನ್ನಿಕಾ ಪರಮೇಶ್ವರ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದರು.
ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟ ಆಯೋಜಿಸಿರುವ ಕಾರ್ಯಕ್ರಮದಲ್ಲಿ ನೌಕರರು ಮತ್ತು ಸಾರ್ವಜನಿಕರು ಭಾಗವಹಿಸಲು ಒಟ್ಟು ೫ ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ೧೦ ಸಾವಿರ ಜನರು ಆಗಮಿಸುವ ನಿರೀಕ್ಷೆಯಿದೆ ಎಂದರು.
ಎರಡು ರೀತಿಯ ವೇದಿಕೆಗಳಿಗೆ ಸಕಲ ಸಿದ್ಧತೆ ಭರದಿಂದ ಸಾಗಿದೆ. ಒಂದು ವೇದಿಕೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದರೆ, ಇನ್ನೊಂದು ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಗಾಯಕಿ ಸಂಗೀತಾಕಟ್ಟಿ ಮತ್ತು ಬಳಗದಿಂದ ಬೆಳಿಗ್ಗೆ ೮-೩೦ ರಿಂದ ೧೦-೩೦ ರವರೆಗೆ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಡಾ.ಎಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

Get real time updates directly on you device, subscribe now.

Comments are closed.

error: Content is protected !!