ತುಮಕೂರು: ಮಧುಗಿರಿ ತಾಲ್ಲೂಕಿನ ಬ್ಯಾಲ್ಯ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ಹಿಸುತ್ತಿರುವ ಪಿಡಿಓ, ಕಾರ್ಯದರ್ಶಿ ಹಾಗೂ ಬಿಲ್ ಕಲೆಕ್ಟರ್ ಗಳನ್ನು ಅಮಾನತುಪಡಿಸುವಂತೆ ಒತ್ತಡ ಹೇರುತ್ತಿರುವ ಸಾರ್ವಜನಿಕರ ಆಗ್ರಹಕ್ಕೆ ಮಣಿಯದೆ ಅವರಿಗೂ ಸಮಜಾಯಿಷಿ ನೀಡಲು ಅವಕಾಶ ನೀಡಬೇಕು ಎಂದು ಪಂಚಾಯಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯ್ತಿಗಳಲ್ಲಿ ನೌಕರರು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಒತ್ತಡಗಳ ನಡುವೆಯೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಜಿಪಂ ಸಿಇಓಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಧುಗಿರಿ ತಾಲ್ಲೂಕಿ ಬ್ಯಾಲ್ಯ ಗ್ರಾಪಂ ನಲ್ಲಿ ನಿವೇಶನ ರಹಿತರಿಗೆ ಹಂಚುವ ಜಾಗದ ವಿಚಾರದ ಬಗ್ಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದು, ನಿಯಮಾನುಸಾರ ಕ್ರಮ ವಹಿಸಲು ಸಾಧ್ಯವಾಗಿಲ್ಲ ಎಂದು ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಪಿಡಿಓ ತಿಳಿಸಿದ್ರೆ ಇದೇ ವಿಚಾರವಾಗಿ ಗ್ರಾಪಂ ಕಾರ್ಯದರ್ಶಿ ಮತ್ತು ಬಿಲ್ ಕಲೆಕ್ಟರ್ ಬಗ್ಗೆ ದೂರು ಸ್ವೀಕೃತವಾಗಿದ್ದು, ತಾಪಂನಲ್ಲಿ ಪರಿಶೀಲನಾ ಹಂತದಲ್ಲಿದೆ, ಈ ನಡುವೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಈ ನೌಕರರನ್ನು ಅಮಾನತು ಮಾಡುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಗ್ರಾಪಂ ಗಳಲ್ಲಿ ಕಾರ್ಯನಿರ್ವಹಿಸುವ ನೌಕರರ ಮೇಲೆ ಈ ರೀತಿಯ ಒತ್ತಡ ಹೇರಿದರೆ ಸಿಬ್ಬಂದಿಗೆ ಮಾನಸಿಕ ಸ್ಥೆöÊರ್ಯ ಕುಗ್ಗಿ ಹೋಗಿ ಆಡಳಿತ ನಿರ್ವಹಣೆಗೆ ತೀವ್ರ ತೊಂದರೆಯಾಗಲಿದೆ, ಆದ್ದರಿಂದ ಸದರಿ ನೌಕರರಿಗೆ ಜಮಾಯಿಸಿ ನೀಡಲು ಅವಕಾಶ ನೀಡಬೇಕು ಹಾಗೂ ಯಾವುದೇ ಕಾರಣಕ್ಕೂ ಸಾರ್ವಜನಿಕರ ಪ್ರತಿಭಟನೆಯ ಕಾರಣದಿಂದಾಗಿ ಗ್ರಾಪಂ ಅಧಿಕಾರಿ, ನೌಕರರ ಮೇಲೆ ಕ್ರಮ ಜರುಗಿಸಬಾರದು ಎಂದು ಮನವಿಯಲ್ಲಿ ಕೋರಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ನಾಗರಾಜು ತಿಳಿಸಿದ್ದಾರೆ.
ಬ್ಯಾಲ್ಯ ಗ್ರಾಪಂ ಪಿಡಿಓ ಅಮಾನತಿಗೆ ಆಗ್ರಹ
Get real time updates directly on you device, subscribe now.
Prev Post
Next Post
Comments are closed.