ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

100

Get real time updates directly on you device, subscribe now.

ನಟ ಬುಲೆಟ್ ಪ್ರಕಾಶ್

ಬೆಂಗಳೂರು: ಕನ್ನಡದ ಪ್ರಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಅನಾರೋಗ್ಯದ ಕಾರಣದಿಂದ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲಸುತ್ತಿದ್ದ ಅವರು ಕಳೆದರಡು ದಿನಗಳಿಂದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸತತ ಚಿಕಿತ್ಸೆಯ ಬಳಿಕ ಸೋಮವಾರ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿತ್ತು, ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸೋಮವಾರ ಮಧ್ಯಾಹ್ನನದ ವೇಳೆಗೆ ಸಾವನ್ನಪ್ಪಿದ್ದಾರೆ. ಬುಲೆಟ್ ಪ್ರಕಾಶ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ದುನಿಯಾ ವಿಜಯ್, ದರ್ಶನ್, ಶಿವರಾಜ್ ಕುಮಾರ್ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಅವರು ಹೊಂದಿದ್ದರು. ದುನಿಯಾ ವಿಜಯ್ ಸೇರಿದಂತೆ ಹಲವು ನಟರು ಬುಲೆಟ್ ಪ್ರಕಾಶ್ ಅವರನ್ನು ಕಾಣಲು ಆಸ್ಪತ್ರೆಗೆ ಆಗಮಿಸಿ ಬುಲೆಟ್ ಪ್ರಕಾಶ್ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯ ಮಾಡಿದರು.
ತೂಕ ಇಳಿಸಿಕೊಳ್ಳುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬುಲೆಟ್ ಪ್ರಕಾಶ್ ಅವರು ಕೆಲ ತಿಂಗಳ ಹಿಂದೆ ತೂಕ ಕಳೆದುಕೊಳ್ಳಲು ಶಸ್ತ್ರಚಿಕಿತ್ಸೆಗೆ ಒಳಗಾದರು. ಆಗಿನಿಂದಲೂ ಖಾಯಿಲೆಗಳು ಅವರ ಬೆನ್ನು ಬಿದ್ದವು. ಈ ಹಿಂದೆಯೂ ಅವರು ಆಸ್ಪತ್ರೆಗೆ ದಾಖಲಾಗಿ, ಸಾವು-ಬದುಕಿನ ನಡುವೆ ಹೋರಾಡಿ ಚೇತರಿಸಿಕೊಂಡು ಹೊರಬಂದಿದ್ದರು. ಶಾಂತಿ ಕ್ರಾಂತಿ ಸಿನಿಮಾದ ಮೂಲಕ ಸಿನಿಮಾ ಪ್ರವೇಶಿಸಿದರು. ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಅವರು ಖಾಯಂ ಹಾಸ್ಯ ಕಲಾವಿದರಾಗಿದ್ದರು.

Get real time updates directly on you device, subscribe now.

Comments are closed.

error: Content is protected !!