ಶಿರಾ ನಗರ ಸಭೆ ವಾರ್ಡ್ 21ಕ್ಕೆ ಚುನಾವಣೆ

251

Get real time updates directly on you device, subscribe now.

ತುಮಕೂರು: ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ವಾರ್ಡ್ ನಂಬರ್ 21 ರಿಂದ ಕೌನ್ಸಿಲರನ್ನು ಚುನಾಯಿಸುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಸಂಬಂಧ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿರುತ್ತದೆ.

ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಯ ವಾರ್ಡ್ ವ್ಯಾಪ್ತಿಯಲ್ಲಿ ಸದಾಚಾರ ಸಂಹಿತೆಯು ಮೇ 2 ರಿಂದ ಜಾರಿಗೆ ಬರಲಿದ್ದು, ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ಅಂದರೆ ಮೇ 22 ರವರೆಗೆ ಜಾರಿಯಲ್ಲಿರುತ್ತದೆ. ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸಂಚಾರ ಸಂಹಿತೆಯು ಯಾವುದೇ ರೀತಿಯಲ್ಲೂ ಉಲ್ಲಂಘನೆಯಾಗದಂತೆ ಸಹಕರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಮೇ 2 ರ ಸೋಮವಾರ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಪತ್ರ- 1ನ್ನು ಹೊರಡಿಸುವ ದಿನವಾಗಿರುತ್ತದೆ, ಮೇ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ, ಮೇ 10 ನಾಮಪತ್ರ ಪರಿಶೀಲಿಸುವ ದಿನ, ಮೇ 12 ಉಮೇದುವಾರಿಕೆ ಹಿಂತೆಗೆದುಕೊಳ್ಳುವ ಕೊನೆಯ ದಿನ, ಮೇ 20 ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ (ಸಮಯ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ), ಮೇ 21 ಮರು ಮತದಾನವಿದ್ದಲ್ಲಿ ಮತದಾನ ನಡೆಸಬೇಕಾದ ದಿನ (ಸಮಯ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ), ಮೇ 22 ಮತಗಳ ಎಣಿಕೆಯ ದಿನ (ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ) ಮತ್ತು ಮೇ 22 ಚುನಾವಣೆ ಮುಕ್ತಾಯಗೊಳ್ಳುವ ದಿನವಾಗಿರುತ್ತದೆ.

Get real time updates directly on you device, subscribe now.

Comments are closed.

error: Content is protected !!