ಅಪಘಾತದಲ್ಲಿ ಬಸ್ ಚಾಲಕ ಸಾವು

332

Get real time updates directly on you device, subscribe now.

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಶೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಉದಯಕುಮಾರ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರಿನಿಂದ ಶಿರಾ ಕಡೆಗೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಚಾಲಕ ಅಥಣಿ ಪಟ್ಟಣದ ಉದಯಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಸೇರಿದಂತೆ ಬಸ್ಸಿನಲ್ಲಿದ್ದ 10 ಮಂದಿ ಗಾಯಗೊಂಡಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!