ಬಿಜೆಪಿ ವಿವಿಧ ಪ್ರಕೋಷ್ಠ ಮುಖಂಡರ ಸಮಾವೇಶ 7ಕ್ಕೆ

196

Get real time updates directly on you device, subscribe now.

ತುಮಕೂರು: ಬಿಜೆಪಿ ಪಕ್ಷದ ವಿವಿಧ ಪ್ರಕೋಷ್ಠಗಳ ಮುಖಂಡರ ಸಮಾವೇಶ ಮೇ 07 ರಂದು ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ನಡೆಯಲಿದೆ ಎಂದು ಬಿಜೆಪಿ ವಿವಿಧ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಬ್ಯಾಟರಂಗೇಗೌಡ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 07ರ ಶನಿವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಾವೇಶ ನಡೆಯಲಿದ್ದು, ಜಿಲ್ಲೆಯ 2600 ಮಂಡಲಗಳ 1500ಕ್ಕೂ ಹೆಚ್ಚು ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬಿಜೆಪಿ ಪಕ್ಷದ ಬೇರುಗಳಾದ ಪ್ರಕೋಷ್ಠಗಳು ಚುನಾವಣೆಯಲ್ಲಿ ಮತ್ತು ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಇವುಗಳ ನಾಯಕರಿಗೆ ಚುನಾವಣೆಯಲ್ಲಿ ಮತ್ತು ಬಿಜೆಪಿ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ಎಂಬ ವಿಚಾರವಾಗಿ ಪಕ್ಷದ ಮುಖಂಡರಾದ ಭಾನುಪ್ರಕಾಶ್ ಅವರು ಉಪನ್ಯಾಸ ನೀಡಲಿದ್ದಾರೆ. ಸಮಾವೇಶದಲ್ಲಿ ಬಿಜೆಪಿ ಪಕ್ಷದೊಂದಿಗೆ ಕೆಲಸ ಮಾಡುತ್ತಿರುವ ಪ್ರಶಿಕ್ಷಣ, ಸಹಕಾರ, ಅಸಂಘಟಿತ ಕಾರ್ಮಿಕ, ಕಲೆ ಮತ್ತು ಸಾಂಸ್ಕೃತಿಕ, ವ್ಯಾಪಾರಿ, ಕಾನೂನು, ವೈದ್ಯಕೀಯ, ಪ್ರಬುದ್ದರ, ವೃತ್ತಿಪರರ, ಕೈಗಾರಿಕಾ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಫಲಾನುಭವಿ, ಶಿಕ್ಷಕರ, ಹಾಲು ಉತ್ಪಾದಕರ, ಹಿರಿಯ ನಾಗರಿಕರ, ಪಂಚಾಯತ್ ರಾಜ್ ನಗರ, ಪೂರ್ವಸೈನಿಕ, ಆರ್ಥಿಕ, ಸೇರಿ 24 ಪ್ರಕೋಷ್ಠಗಳ ಮುಖಂಡರು ಭಾಗವಹಿಸಲಿದ್ದಾರೆ. ತುಮಕೂರು ಜಿಲ್ಲೆಯಿಂದ ಆರಂಭಗೊಳ್ಳುವ ಪ್ರಕೋಷ್ಠಗಳ ಸಮಾವೇಶ, ಎಲ್ಲಾ ಜಿಲ್ಲೆಗಳಲ್ಲಿಯೂ ನಡೆದು, ಚಿಕ್ಕಮಗಳೂರಿನಲ್ಲಿ ಮುಕ್ತಾಯಗೊಳ್ಳದೆ, ಸಮಾವೇಶಗಳಲ್ಲಿ ಪಾಲ್ಗೊಳ್ಳುವ ಪ್ರಕೋಷ್ಠಗಳ ಮುಖಂಡರು, ತಮ್ಮ ತಮ್ಮ ಮಂಡಲಗಳಿಗೆ ತೆರಳಿ ಮತದಾರರೊಂದಿಗೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬ್ಯಾಟರಂಗೇಗೌಡ ತಿಳಿಸಿದರು.
ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲೆಯ ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜೋತಿಗಣೇಶ್, ಡಾ.ರಾಜೇಶ ಗೌಡ, ಮಸಾಲೆ ಜಯರಾಮ್, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಕೆ.ಎಸ್.ಕಿರಣ್ ಕುಮಾರ್, ಬಿ.ಸುರೇಶಗೌಡ ಹಾಗೂ ರಾಜ್ಯ ಮತ್ತು ಜಿಲ್ಲೆಯ ಪದಾಧಿಕಾರಿಗಳು, ಹಿರಿಯರು, ಪ್ರಮುಖರು ಆಗಮಿಸಲಿದ್ದಾರೆ ಎಂದು ಬ್ಯಾಟರಂಗೇಗೌಡ ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಕೆ.ಪಿ.ಮಹೇಶ್, ವಿವಿಧ ಪ್ರಕೋಷ್ಠಗಳ ಸಂಚಾಲಕರಾದ ಹೆಚ್.ಎನ್.ನಟರಾಜು, ನಂಜೇಗೌಡ, ಹಿಮಾನಂದ್.ಡಿ.ಸಿ., ಕೆ.ಶಂಕರ್, ಅಂಜನಪ್ಪ, ಸಣ್ಣರಾಮಯ್ಯ, ಶ್ರೀಧರ್, ಷಣ್ಮುಖ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!