ಆಟೋಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬಾಲಕಿ ಸಾವು

449

Get real time updates directly on you device, subscribe now.

ತುಮಕೂರು: ಚಲಿಸುತ್ತಿದ್ದ ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಂದು ಮಗು ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ತಾಲ್ಲೂಕಿನ ಹೊಸಳ್ಳಿ ಬಳಿ(ಗೆರೆಹಳ್ಳಿ) ಕೆಎಸ್ಆರ್ಟಿಸಿ ಬಸ್ ಆಟೋಗೆ ಗುದ್ದಿದ ಪರಿಣಾಮ ಆಟೋದಲ್ಲಿ ಸಾಗುತ್ತಿದ್ದ ಪ್ರತಿಭಾ (15) ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕಿಯನ್ನು (12) ತುರ್ತು ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಯಿತು.
ಇನ್ನು ಆಟೋದಲ್ಲಿದ್ದ ಓರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಸ್ ಗುದ್ದಿದ ರಭಸಕ್ಕೆ ಆಟೋದಲ್ಲಿದ್ದ ಮೂವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ರಸ್ತೆಯಲ್ಲಿ ನರಳಾಡುತ್ತಿದ್ದ ದೃಶ್ಯ ಕಂಡು ಬಂದಿತ್ತು, ಸಾರ್ವಜನಿಕರು ಸಹಾಯಕ್ಕೆ ಮುಂದಾಗಿಲ್ಲ ಜೊತೆಗೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬರದೆ ಗಾಯಾಳು ರಸ್ತೆಯಲ್ಲೇ ನರಳಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!