ಗುಬ್ಬಿ: ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿರುವ ಹೋಟೆಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ದಿನಸಿ ಪದಾರ್ಥಗಳು, ಫಾರ್ನಿಚರ್ ಗಳು, ಎರಡು ಫ್ರಿಡ್ಜ್, ಒಂದು ಡಿಯೋ ಬೈಕ್ ಜೊತೆಗೆ ನಗದು ಹಣ ನಾಲ್ಕು ಸಾವಿರ ರೂ. ಸೇರಿದಂತೆ ಭರ್ತಿ 6 ರಿಂದ 7 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಬಾರದ ಬೆಸ್ಕಾಂ ಸಿಬ್ಬಂದಿ: ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿ ಒಂದು ಗಂಟೆಯಾದರೂ ಯಾವುದೇ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಗ್ರಾಮಲೆಕ್ಕಿಗರಾದ ಮಾದೇವಿ ಭೇಟಿ.. ಘಟನೆಯ ಬಗ್ಗೆ ಮಾಹಿತಿ ತಿಳಿದ ಗ್ರಾಮಲೆಕ್ಕಿಗರಾದ ಮಾದೇವಿ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಬದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮೋಹನ್ ಕುಮಾರ್, ಹೋಟೆಲ್ ಮಾಲೀಕರ ಸಂಘದ ಸದಸ್ಯರಾದ ಈರಣ್ಣ ಸೇರಿದಂತೆ ಇನ್ನಿತರರು ಇದ್ದರು.
Comments are closed.