ತುಮಕೂರು: ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಓಂಕಾರ್ ಮಾತನಾಡಿ, ಜಿಲ್ಲೆಯಲ್ಲಿ ನೂರಕ್ಕು ಹೆಚ್ಚು ಎಸ್.ಸಿ ಮತದಾರರಿರುವ ಬೂತ್ಗಳನ್ನು ಗುರುತಿಸಿ, ಎಸ್.ಸಿ ಮೋರ್ಚಾ ಬೂತ್ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ, ಮುಂದಿನ ದಿನಗಳಲ್ಲಿ ಎಸ್.ಸಿ ಬೂತ್ ಸಮಿತಿ ಸದಸ್ಯರ ಸಭೆ ಆಯೋಜಿಸಿ ಕೇಂದ್ರ ರಾಜ್ಯ ಸರ್ಕಾರಗಳ ದಲಿತ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರತಿ ದಲಿತ ಮನೆಗಳಿಗೆ ತಲುಪಿಸುವ ಸಂಕಲ್ಪ ಮಾಡಲಾಗುವುದು. ಕೇಂದ್ರ ಸರ್ಕಾರವು ನಮ್ಮ ಜಿಲ್ಲೆಯ ದಲಿತ ಸಮುದಾಯದ ಸೂಲಗಿತ್ತಿ ನರಸಮ್ಮ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ ಪದ್ಮ ಪುರಸ್ಕಾರಗಳನ್ನು ನೀಡಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಸಭೆ ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವುದರಿಂದ ಎಸ್.ಸಿ ಮೋರ್ಚಾ ಜಿಲ್ಲೆಯಲ್ಲಿ ಹೆಚ್ಚು ಕ್ರಿಯಾಶೀಲವಾಗಬೇಕು, ಪಕ್ಷ ಜಿಲ್ಲೆಯಲ್ಲಿ ಸಧೃಡವಾಗಿದೆ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್ ದಲಿತ ಪರ ಬಿಜೆಪಿ ವಿಚಾರವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಪ್ಪ, ಕಾರ್ಮಿಕ ಪ್ರಕೋಷ್ಠ ರಾಜ್ಯ ಸಂಚಾಲಕ ಬ್ಯಾಟರಂಗೇಗೌಡ, ಟೂಡಾ ಸದಸ್ಯ ಪ್ರತಾಪ್, ಎಸ್.ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ದರ್ಶಿಗಳಾದ ನರಸಿಂಹಮೂರ್ತಿ, ಲೋಕೇಶ್, ಮಂಡಲ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ
Get real time updates directly on you device, subscribe now.
Prev Post
Next Post
Comments are closed.