ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾಧಿಕಾರಿ

126

Get real time updates directly on you device, subscribe now.

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಮತ್ತು ಮಾಸಾಚರಣೆ ಕುರಿತ ಜಾಥಾ ಕಾರ್ಯಕ್ರಮಕ್ಕೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು, ಜಾಥಾ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು, ವಿದ್ಯಾರ್ಥಿಗಳು ಬುದ್ಧಿವಂತರು, ವಿಚಾರ ಮಾಡುವ ಶಕ್ತಿಯುಳ್ಳವರು, ಸಾಧಿಸುವ ಛಲವುಳ್ಳರಾಗಿರಬೇಕು ಎಂದರಲ್ಲದೆ, ಮಕ್ಕಳ ಯಾವುದೇ ರೀತಿಯ ಸಹಾಯಕ್ಕಾಗಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಅಗತ್ಯ ರಕ್ಷಣೆ ಮತ್ತು ಪೋಷಣೆ ನೀಡಲಾಗುವುದು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಮಕ್ಕಳ ಮೇಲೆ ವಿವಿಧ ರೀತಿಯ ದೌರ್ಜನ್ಯ ಪ್ರಕರಣ ವರದಿಯಾಗುತ್ತಲೇ ಇರುತ್ತವೆ, ಮಕ್ಕಳು ಯಾವುದೇ ತೊಂದರೆಗೆ ಒಳಗಾದಾಗ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿದರೆ ಇಲಾಖಾಧಿಕಾರಿಗಳು ಭೇಟಿ ನೀಡಿ ಅಗತ್ಯ ರಕ್ಷಣೆ ನೀಡುತ್ತಾರೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ ತೊಂದರೆಯಲ್ಲಿರುವ ಯಾವುದೇ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬಹುದು ಎಂದರಲ್ಲದೇ ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಡಿಡಿಪಿಐ ಸಿ.ನಂಜಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ಶಿಕ್ಷಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!