ಕರೆಂಟ್ ಶಾಕ್ ಗೆ ಮಹಿಳೆ ಬಲಿ- ಪರಿಹಾರಕ್ಕೆ ಒತ್ತಾಯ

210

Get real time updates directly on you device, subscribe now.

ಮಧುಗಿರಿ: ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಮಹಿಳೆಯೊಬ್ಬರು ಬಲಿಯಾಗಿದ್ದು, ಮೃತ ಲಕ್ಷ್ಮಮ್ಮ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದಲ್ಲಿ ಜನರೊಂದಿಗೆ ತೆರಳಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಸಿದರು.

ಬುಧವಾರ ತಾಲೂಕಿನ ದೊಡ್ಡೇರಿ ಹೋಬಳಿಯ ಹಾವಿನಮಡುಗು ಗ್ರಾಮದಲ್ಲಿ ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ದಲಿತ ಮಹಿಳೆ ಲಕ್ಷ್ಮಮ್ಮ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ನಂತರ ಮಾತನಾಡಿ, ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು, ಜನರ ಜೀವಕ್ಕೆ ಬೆಲೆ ಇಲ್ಲವೇ ಎಂಬಂತಾಗಿದೆ, ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಮಹಿಳೆ ಲಕ್ಷ್ಮಮ್ಮ ಬಡಕುಟುಂಬಕ್ಕೆ ಸೇರಿದವರಾಗಿದ್ದು, ಕೂಲಿ ಮಾಡಿ ಜೀವನ ನಿರ್ವಹಿಸುತ್ತಿದ್ದರು, ಈಗ ಇವರ ಕುಟುಂಬಕ್ಕಿದ್ದ ಆಸರೆಯನ್ನೂ ಕಳೆದುಕೊಂಡಂತಾಗಿದೆ, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಮಹಿಳೆಯ ಸಾವು ಸಂಭವಿಸಿದ್ದು, ವಿದ್ಯುತ್ ತಂತಿ ಸರಿಪಡಿಸಿ ಎಂದು ದೂರು ನೀಡಿದ್ದರೂ ತಂತಿ ಸರಿಪಡಿಸದಿರುವುದು ಸರಿಯಲ್ಲ, ಈ ಭಾಗದಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಆಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಬೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದರು.
ನಗರ ಸಭೆ ಮಾಜಿ ಅಧ್ಯಕ್ಷ ಟಿ.ಪಿ.ಮಂಜುನಾಥ, ಚಂದ್ರಗಿರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮೀ ನಾರಾಯಣ್, ಚಿಕ್ಕಮಾಲೂರು ಗ್ರಾಪಂ ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್, ಮುಖಂಡರಾದ ನಾರಾಯಣ ಗೌಡ, ಡಿ.ಹೆಚ್.ನಾಗರಾಜು, ದಲಿತ ಮುಖಂಡ ದೊಡ್ಡೇರಿ ಕಣಿಮಯ್ಯ, ಮಂಜುನಾಥ್, ಸತೀಶ್ ಪೂಜಾರ್, ವಸಂತ್, ಓಬಳೇಶ್, ಕೆ.ಶಿವಣ್ಣ, ಸಿದ್ದಗಂಗಪ್ಪ, ಮಹಾಲಿಂಗಪ್ಪ, ನರಸಿಂಹಮೂರ್ತಿ, ಕುಮಾರ್, ರಾಕೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ.ಕೆ.ವೆಂಕಟೇಶ್ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!