ತುಮಕೂರು: ತಮ್ಮನ್ನು ಸೇವೆಯಲ್ಲಿ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಟೌನ್ಹಾಲ್ ವೃತ್ತದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ವರೆಗೂ ಸಾಗಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್, ತುಮಕೂರು ಜಿಲ್ಲೆಯಾದ್ಯಂತ ಸುಮಾರು 3000 ಹೊರಗುತ್ತಿಗೆ ನೌಕರರು ವಿವಿಧ ತಾಲೂಕುಗಳ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಹಾಗೂ ತುಮಕೂರು ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಯಾವುದೇ ಸೇವಾ ಭದ್ರತೆ ಇದುವರೆಗೂ ಕಲ್ಪಿಸುವುದಿಲ್ಲ, ಸುಮಾರು ಇಪ್ಪತ್ತು ಇಪ್ಪತ್ತೈದು ವರ್ಷಗಳಿಂದ ಸೇವೆ ಸಲ್ಲಿಸಿದ್ದರು ಪಿಎಫ್, ಇಎಸ್ಐ ಸೌಲಭ್ಯ ನೀಡಿಲ್ಲ, ಕನಿಷ್ಠ ಮಟ್ಟದ ಸೇವಾ ಭದ್ರತೆ ಸಹ ಕಲ್ಪಿಸಿಲ್ಲ, ಆ ದೃಷ್ಟಿಯಿಂದ ಪ್ರತಿದಿನ ನಾಗರಿಕರ ಸೇವೆಯಲ್ಲಿ ತೊಡಗಿರುವ ಪೌರ ಕಾರ್ಮಿಕರನ್ನು ಕೂಡಲೇ ನೇರ ನೇಮಕಾತಿ ಮಾಡುವ ಮೂಲಕ ಅವರ ಜೀವನ ಕಟ್ಟಿಸಿಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಮುಖಂಡರಾದ ಮಂಜುನಾಥ್, ನಾಗರಾಜು, ಶ್ರೀನಿವಾಸ್, ದರ್ಶನ್, ರಾಜಣ್ಣ, ಅಪ್ಸರ್ ಪಾಶ ಇತರರು ಇದ್ದರು.
ಸೇವಾ ಭದ್ರತೆಗಾಗಿ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
Get real time updates directly on you device, subscribe now.
Next Post
Comments are closed.