ಸಂತ್ರಸ್ತರಿಗೆ ದಿನಸಿ ಕಿಟ್ ವಿತರಿಸಿದ ಸ್ವಾಮೀಜಿ

115

Get real time updates directly on you device, subscribe now.

ತುಮಕೂರು: ಅಕಾಲಿಕ ಮಳೆಯಿಂದ ಸಂಕಷ್ಟಕ್ಕೆ ಈಡಾದ ಕೂಲಿ ಹಾಗೂ ಬಡ ಕುಟುಂಬಗಳ ಗುಡಿಸಲುಗಳಿಗೆ ಭೇಟಿ ನೀಡಿದ ಪಾವಗಡದ ರಾಮಕೃಷ್ಣ ಆಶ್ರಮದ ಜಪಾನಂದ ಶ್ರೀಗಳು ಸಂಕಷ್ಟದಲ್ಲಿರುವ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ದಿನಸಿ ಕಿಟ್ ಹಾಗೂ ಟಾರ್ಪಲ್ ಗಳನ್ನು ವಿತರಿಸಿದರು.

ತುಮಕೂರಿನ ಬಡ್ಡಿಹಳ್ಳಿ ಬಳಿ ರಾಯಚೂರು ಮೂಲದ ಕೂಲಿ ಕಾರ್ಮಿಕರು ಗುಡಿಸಲು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರು, ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿದ ಭಾರಿ ಮಳೆಗೆ ಜೋಪಡಿಗಳಲ್ಲಿ ವಾಸವಿದ್ದ ಗುಡಿಸಲುಗಳಿಗೆ ನೀರು ನುಗ್ಗಿ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಈಡಾಗಿದ್ದವು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆಗಳು ಈ ಬಗ್ಗೆ ವರದಿ ಪ್ರಸಾರ ಮಾಡಿದವು, ಅದನ್ನರಿತ ಕೂಡಲೇ ಪಾವಗಡದಿಂದ ತುಮಕೂರಿಗೆ ಆಗಮಿಸಿದ ಶ್ರೀಗಳು ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಪಾವಗಡದ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೇಶನ್ ಹಾಗೂ ರೆಡ್ ಕ್ರಾಸ್ ವತಿಯಿಂದ ಟಾರ್ಪಲ್ ಹಾಗೂ ಒಂದು ತಿಂಗಳಿಗೆ ಬೇಕಾಗುವ ದಿನಸಿ ಕಿಟ್ಗಳನ್ನು ಶ್ರೀಗಳು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೂಲಿಗಾಗಿ ಅರಸಿ ಉತ್ತರ ಕರ್ನಾಟಕ ಮೂಲದ ಹಲವು ಕುಟುಂಬಗಳು ತುಮಕೂರು, ಬೆಂಗಳೂರಿನಂತಹ ನಗರ ಪ್ರದೇಶಗಳಿಗೆ ಬಂದಿದ್ದು, ಇಂತಹ ಬಡ ಕುಟುಂಬಗಳು ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾಗಿದ್ದು ನಿಜಕ್ಕೂ ನೋವಿನ ಸಂಗತಿ, ಹಾಗಾಗಿ ಅಂಥವರ ಗುಡಿಸಲುಗಳಿಗೆ ಭೇಟಿ ನೀಡಿದ ಅವರು ಇಂತಹ ಬಡ ಕುಟುಂಬಗಳಿಗೆ ಸಂಕಷ್ಟದಲ್ಲಿ ನೆರವಾಗುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ತುಮಕೂರು ರೆಡ್ ಕ್ರಾಸ್ ನ ಚೇರ್ಮನ್ ನಾಗಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ ಪುರುಷೋತ್ತಮ್, ಡಾ.ಟಿ.ಆರ್.ಲೀಲಾವತಿ ಸೇರಿದಂತೆ ಹಲವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!