ಆಜಾಧಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ

ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

103

Get real time updates directly on you device, subscribe now.

ತುಮಕೂರು: ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ, ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಸಂವಾದ ನಡೆಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಕಲ್ಯಾಣ ಯೋಜನೆಗಳು ಜನ ಸಾಮಾನ್ಯರಿಗೆ ಯಾವ ರೀತಿಯಲ್ಲಿ ಫಲಪ್ರದವಾಗಿವೆ ಎಂಬುದನ್ನು ತಿಳಿಯಲು ಗರೀಬ್ ಕಲ್ಯಾಣ ಸಮ್ಮೇಳನ ನಡೆಸುತ್ತಿದ್ದಾರೆ ಎಂದರು.
ಪ್ರಧಾನಮಂತ್ರಿ ಆವಾಜ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿಎಂ ಉಜ್ವಲ ಯೋಜನಾ, ಪೋಷಣ್ ಅಭಿಯಾನ್, ಮಾತೃವಂದನಾ ಯೋಜನಾ, ಸ್ವಚ್ಛ ಭಾರತ್ ಮಿಷನ್, ಜಲಜೀವನ್ ಮತ್ತು ಅಮೃತ್ ಯೋಜನೆ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನಾ, ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನಾ, ಆಯುಷ್ಮಾನ್ ಭಾರತ್ ಜನಾರೋಗ್ಯ ಯೋಜನಾ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕಲ್ಯಾಣ ಕೇಂದ್ರ, ಪ್ರಧಾನಮಂತ್ರಿ ಮುದ್ರಾ ಯೋಜನಾ ಸೇರಿದಂತೆ ಹಲವಾರು ಯೋಜನೆ ಜಾರಿಗೊಳಿಸಿ ಜನಸಾಮಾನ್ಯರ ಬದುಕನ್ನು ಕಟ್ಟುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ್ದಾರೆಂದರು.
ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆಯ ಮೂಲಕ ನಾಡಿನ ಜನರಿಗೆ ದವಸ ಧಾನ್ಯಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದರಲ್ಲದೆ ಜನಸಾಮಾನ್ಯರು ಅಡುಗೆ ಮಾಡಲು ಉರುವಲು ಬಳಸಿ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು, ಅದನ್ನು ತಪ್ಪಿಸಲು ಉಜ್ವಲ ಯೋಜನೆ ಜಾರಿಗೆ ತಂದು ಮನೆ-ಮನೆಗೂ ಗ್ಯಾಸ್ ವಿತರಿಸಲು ನರೇಂದ್ರ ಮೋದಿ ನೇತೃತ್ವದ ಮೋದಿ ಸರ್ಕಾರ ಕ್ರಮಕೈಗೊಂಡಿದೆ ಎಂದರು.
ಅಂತೆಯೇ ಜನಧನ ಖಾತೆ ತೆರೆಸುವುದರ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಲು ದಿಟ್ಟ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ವ್ಯಾಪ್ತಿಗೆ ಬರುವ ಮಾತೃವಂದನಾ ಯೋಜನಾ, ಪೋಷಣ್ ಅಭಿಯಾನ, ಆರೋಗ್ಯ ಇಲಾಖೆ ಯೋಜನೆಗಳಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕಲ್ಯಾಣ ಕೇಂದ್ರದ ಫಲಾನುಭವಿಗಳೊಂದಿಗೆ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂವಾದ ನಡೆಸಿದರು.
ವಿವಿಧ ಇಲಾಖೆಗಳ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಯೋಜನೆಗಳ ಫಲಾನುಭವಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!