ತಿಪಟೂರು: ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಸಚಿವ ನಾಗೇಶ್ ಮನೆ ಎದುರು ಜಮಾಯಿಸಿದ್ದರು.
ಹತ್ತು ನಿಮಿಷಗಳ ಕಾಲ ನಾಗೇಶ್ ಅವರ ಮನೆ ಎದುರು ಘೋಷಣೆ ಕೂಗುತ್ತಿದ್ದರು, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅವರನ್ನು ಚದುರಿಸಿದರು. ಈ ನಡುವೆ ಪೊಲೀಸರು ಹಾಗೂ ಎನ್.ಎಸ್.ಯು.ಐ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
4ನೇ ತರಗತಿಯ ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ಪರಿಸರ ಅಧ್ಯಯನ ಪುಸ್ತಕದ ಪರಿಷ್ಕರಣೆ ಆಗಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು ಎಂದು ಖಾರವಾಗಿಯೇ ಟ್ವೀಟ್ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ಬಿಸಿ ನಾಗೇಶ್, ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂದು ಸೋಸಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ಶುದ್ದ ಸುಳ್ಳು. ಇವತ್ತು ಕುವೆಂಪು ಬಗ್ಗೆ ಅವಹೇಳನ ಮಾಡಿದ್ದಾರೆ ಎನ್ನುತ್ತಿದ್ದಾರೆ. ಈ ಹಿಂದೆ ಅನೇಕ ಪಠ್ಯಗಳನ್ನು ಕೈ ಬಿಡಲಾಗಿದೆ. ಆಗ ಮಾತನಾಡದವರು ಈಗ ಧ್ವನಿ ಎತ್ತುತ್ತಿದ್ದಾರೆ. 10ನೇ ತರಗತಿಯಿಂದ ನಾರಾಯಣ ಗುರು ಅವರ ಪಠ್ಯ ತೆಗೆದು ಹಾಕಿಲ್ಲ. ಅವರ ಪಠ್ಯ ಹಾಗೇ ಇದೆ. ಸುಮ್ಮನೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಮಾಡಲು ಹೋರಟಿದ್ದಾರೆ ಎಂದು ಕಿಡಿಕಾರಿದ್ದರು.
ಪ್ರಸ್ತುತ ಸುದ್ದಿ ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯವರು 4ನೇ ತರಗತಿ ಪರಿಸರ ಅಧ್ಯಾಯನ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ/ಅಪಮಾನಗೊಳಿಸಲಾಗಿದೆ ಎಂದು ಪ್ರಸಾರವಾಗುತ್ತಿದೆ. ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕುವೆಂಪುಗೆ ಅಪಮಾನ ಖಂಡಿಸಿ ಸಚಿವರ ಮನೆ ಮುತ್ತಿಗೆ
ಕುವೆಂಪು ಪಾಠ ಇರುವ ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿ.ಸಿ.ನಾಗೇಶ್
Get real time updates directly on you device, subscribe now.
Prev Post
Next Post
Comments are closed.