ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಮೇಜರ್ ಡಿ.ಚಂದ್ರಪ್ಪ (76) ಅವರು ಬುಧವಾರ ಮಧ್ಯಾಹ್ನ 2 ಗಂಟೆಯಲ್ಲಿ ನಿಧನ ಹೊಂದಿದರು.
ಚಂದ್ರಪ್ಪ ಅವರು ಕಳೆದ ಒಂದು ವಾರದಿಂದ ಅನಾರೋಗ್ಯಕ್ಕೆ ತುತ್ತಾಗಿ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಮೇಜರ್ ಡಿ.ಚಂದ್ರಪ್ಪ ಅವರು ತಮ್ಮ ಅಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ನಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿ ಅವಿರತ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ಕಸಾಪ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ಮಧ್ಯೆ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅತ್ಯಂತ ಕ್ರಿಯಾಶೀಲರಾಗಿದ್ದ ಚಂದ್ರಪ್ಪ ಅವರು ಸದಾ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ವಾರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಮೃತರು ಮೂವರು ಹೆಣ್ಣು ಮಕ್ಕಳು, ಪತ್ನಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಶಾಸಕ ಜ್ಯೋತಿಗಣೇಶ್, ಸಂಸದ ಜಿಎಸ್ ಬಸವರಾಜು, ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ, ಡಾ.ಕವಿತಾಕೃಷ್ಣ, ಬಾ.ಹ.ರಮಾಕುಮಾರಿ, ಶಿರಾ ತಾಲ್ಲೂಕು ಮಾಜಿ ಕಸಾಪ ಅಧ್ಯಕ್ಷ ಆರ್.ವಿ.ಪುಟ್ಟಕಾಮಣ್ಣ, ಪತ್ರಕರ್ತ ಸುರೇಶ್ವತ್ಸ ಅನೇಕ ಸಾಹಿತಿಗಳು, ಗಣ್ಯರು, ವಿದ್ಯಾರ್ಥಿವೃಂದ ಸಂತಾಪ ಸೂಚಿಸಿದ್ದಾರೆ.
ಇಂದು ಅಂತ್ಯಕ್ರಿಯೆ: ಗುಬ್ಬಿ ತಾಲ್ಲೂಕಿನ ಕುಪ್ಪೂರು ಪಾಳ್ಯದ ಮೃತರ ತೋಟದಲ್ಲಿ (ಜೂ.9) ಬೆಳಿಗ್ಗೆ 11 ಗಂಟೆಗೆ ವೀರಶೈವದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಸಾಪ ಮಾಜಿ ಅಧ್ಯಕ್ಷ ಪ್ರೊ. ಡಿ. ಚಂದ್ರಪ್ಪ ಇನ್ನಿಲ್ಲ
Get real time updates directly on you device, subscribe now.
Prev Post
Comments are closed.