ವಿಶ್ವ ಯೋಗ ದಿನಾಚರಣೆಗೆ ಸಕಲ ಸಿದ್ಧತೆ: ಡೀಸಿ

157

Get real time updates directly on you device, subscribe now.

ತುಮಕೂರು: ಸರ್ಕಾರದ ಆದೇಶದ ಮಾರ್ಗಸೂಚಿಗಳನ್ವಯ ಜೂನ್ 21 ರಂದು ಮನುಕುಲಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ 8ನೇ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ತಮ್ಮ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ದೇಶಾದ್ಯಂತ 75 ಸ್ಥಳಗಳಲ್ಲಿ ಸರ್ಕಾರ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನ, ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಮತ್ತು ತಿಪಟೂರು ಕಲ್ಪತರು ಕಾಲೇಜಿನ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜೂನ್ 21 ರಂದು ಬೆಳಗ್ಗೆ ನಿಗದಿತ ಸ್ಥಳದಲ್ಲಿ ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಬೇಕು, 6 ಗಂಟೆಯಿಂದ 8 ಗಂಟೆಯವರೆಗೆ ಯೋಗಾಭ್ಯಾಸ ನಡೆಯಲಿದೆ ಎಂದ ಅವರು ಯೋಗದ ಮಹತ್ವದ ಬಗ್ಗೆ ನುರಿತ ತಜ್ಞರಿಂದ ಉಪನ್ಯಾಸ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿ ಡಾ.ಸಂಜೀವ ಮೂರ್ತಿ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್, ನೆಹರು ಯುವ ಕೇಂದ್ರ, ಎನ್ಸಿಸಿ, ಬ್ರಹ್ಮಕುಮಾರಿ ಸಮಾಜದ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!