ತುಮಕೂರು: ಜಿಲ್ಲಾ ಪಂಚಾಯಿತಿ ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಚೇರಿಗಳಲ್ಲಿನ ಶಿಶುಪಾಲನಾ ಕೇಂದ್ರ ತೆರೆಯ ಬೇಕೆಂಬ ರಾಜ್ಯ ಸರಕಾರದ ನಿರ್ದೇಶನದ ಹಿನ್ನೇಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಮರ್ಥ್ ಪೌಂಢೇಷನ್ ಸಹಯೋಗದಲ್ಲಿ ಶಿಶುಪಾಲನಾ ಕೇಂದ್ರ ಉದ್ಘಾಟಿಸಲಾಯಿತು.
ಜಿಲ್ಲಾ ಪಂಚಾಯತ್ ಕಚೇರಿಯ ಮೂರನೇ ಮಹಡಿಯಲ್ಲಿ ಶಿಶುಪಾಲನಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಿಇಓ ಡಾ.ಕೆ.ವಿದ್ಯಾಕುಮಾರಿ, ಸರಕಾರದ ನಿರ್ದೇಶನದಂತೆ ಮಹಿಳಾ ಸರಕಾರಿ ನೌಕರರ ಅನುಕೂಲಕ್ಕಾಗಿ ನಗರದಲ್ಲಿ ಎರಡು ಕಡೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಯೂ ಇದೇ ರೀತಿಯೇ ಕೇಂದ್ರ ತೆರೆಯಲು ಸಿದ್ಧತೆ ಕೈಗೊಳ್ಳಲಾಗಿದೆ, ಅಲ್ಲದೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಸ್ತ ಮಹಿಳೆಯರ 0-6 ವರ್ಷದವರೆಗಿನ ಮಕ್ಕಳ ಪಾಲನೆಗಾಗಿ ಜಿಲ್ಲೆಯಲ್ಲಿ ಎರಡು ಕಡೆ ಇದೇ ರೀತಿಯ ಶಿಶುಪಾಲನಾ ಕೇಂದ್ರ ತೆರೆಯಲು ಈಗಾಗಲೇ ಜಾಗ ಗುರುತಿಸಿ, ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅನುಮೋದನೆ ದೊರೆತ ಕೂಡಲೇ ತುಮಕೂರು ಮತ್ತು ತಿಪಟೂರಿನಲ್ಲಿ ಈ ಕೇಂದ್ರಗಳು ಆರಂಭಗೊಳ್ಳಲಿವೆ ಎಂದರು.
ಜಿಲ್ಲಾ ಪಂಚಾಯತ್ ಕಚೇರಿಯ ಮೂರನೇ ಮಹಡಿಯಲ್ಲಿರುವ ಶಿಶುಪಾಲನಾ ಕೇಂದ್ರದ ನಿರ್ವಹಣೆಯ ಜವಾಬ್ದಾರಿಯನ್ನು ಸಮರ್ಥ್ ಫೌಂಡೇಷನ್ ಎಂಬ ಎನ್ಜಿಓಗೆ ನೀಡಲಾಗಿದೆ, ಅವರು ತಮ್ಮಲ್ಲಿರುವ ಮಾನವ ಸಂಪನ್ಮೂಲ ಬಳಸಿಕೊಂಡು, ಇಲ್ಲಿಗೆ ಬರುವ ಮಕ್ಕಳಿಗೆ ಅಗತ್ಯ ಪೋಷಣೆ ನೀಡಲಿದ್ದಾರೆ, ಮಹಿಳಾ ಸರಕಾರಿ ನೌಕರರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಈ ಕೇಂದ್ರಕ್ಕೆ ಬಿಡಬಹುದಾಗಿದೆ ಎಂದು ಸಿಇಓ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯದರ್ಶಿ ಅತೀಕ್ ಪಾಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಸಿಡಿಪಿಓಗಳಾದ ದಿನೇಶ್, ಮಂಜುನಾಥ್, ಮೇಲ್ವಿಚಾರಕಿ ಪವಿತ್ರ, ಸಮರ್ಥ್ ಫೌಂಡೇಷನ್ನ ರಾಣಿ ಚಂದ್ರಶೇಖರ್, ಶಿಶುಪಾಲನಾ ಕೇಂದ್ರದ ಸಿಬ್ಬಂದಿ ಹಾಜರಿದ್ದರು.
ಜಿಪಂ ಕಚೇರಿಯಲ್ಲಿ ಶಿಶುಪಾಲನಾ ಕೇಂದ್ರ ಉದ್ಘಾಟನೆ
Get real time updates directly on you device, subscribe now.
Prev Post
Comments are closed.