ಜೆಡಿಎಸ್ ಗೆ ಅಲ್ಪಸಂಖ್ಯಾತರ ಮತ ಸೆಳೆಯಲು ಶ್ರಮಿಸುವೆ: ಸುಲ್ತಾನ್

191

Get real time updates directly on you device, subscribe now.


ತುಮಕೂರು: ತುಮಕೂರು ಜಿಲ್ಲಾ ಜೆಡಿಎಸ್ ಪಕ್ಷದ ಹಿರಿಯ ಉಪಾಧ್ಯಕ್ಷರಾಗಿ ಟೂಡಾ ಮಾಜಿ ಅಧ್ಯಕ್ಷ ಹಾಗೂ ಆಡಿಟರ್ ಸುಲ್ತಾನ್ ಮೊಹಮದ್ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಅವರು ನೇಮಕ ಮಾಡಿದ್ದು, ನೇಮಕಾತಿ ಪತ್ರವನ್ನು ಪಕ್ಷದ ಕಚೇರಿಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ವಿತರಿಸಿದರು.
ಪಂಚರತ್ನ ಯಾತ್ರೆ ತುಮಕೂರು ಜಿಲ್ಲೆ ಯ ವೀಕ್ಷಕರಾಗಿ ಆಗಮಿಸಿದ್ದ ಪಕ್ಷದ ಮುಖಂಡರಾದ ಆಂದಾನಪ್ಪ, ರಂಗನಾಥಪ್ಪ, ಪಕ್ಷದ ರಾಜ್ಯ ಕಾರ್ಯದರ್ಶಿ ದೇವರಾಜು, ಉಗ್ರೇಶ್, ರೈತ ಘಟಕದ ರಂಗನಾಥ್, ಸೇವಾದಳದ ಕೆಂಪರಾಜು, ನಗರ ಅಧ್ಯಕ್ಷ ವಿಜಯಗೌಡ, ಡಾಂಡೇಲಿ ಗಂಗಣ್ಣ, ಮಹಿಳಾ ಘಟಕದ ಅಧ್ಯಕ್ಷೆ ತಾಹೀರಾಭಾನು, ಲಕ್ಷ್ಮಿನಾಯಕ್, ಆಶಾಜೈನ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ತನ್ವೀರ್ ಅಹಮದ್, ಪ್ರಧಾನ ಕಾರ್ಯದರ್ಶಿ ಬಾಬು ಅವರ ಸಮ್ಮುಖದಲ್ಲಿ ಸುಲ್ತಾನ್ ಮೊಹಮದ್ ಅವರಿಗೆ ನೇಮಕಾತಿ ಪತ್ರ ವಿತರಿಸಿದರು.
ಈ ವೇಳೆ ಮಾತನಾಡಿ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ, ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕೆನ್ನುವ ಉದ್ದೇಶದಿಂದ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಬೇಕೆನ್ನುವ ಉದ್ದೇಶದಿಂದ ಹಿರಿಯರು ಆದ ಸುಲ್ತಾನ್ ಮೊಹಮದ್ ಅವರನ್ನು ಪಕ್ಷದ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ, ಇಂದು ನೇಮಕಾತಿ ಪತ್ರ ವಿತರಿಸಿ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಮಾಡಿ, ಈ ಬಾರಿ ಅತಿ ಹೆಚ್ಚು ಅಲ್ಪಸಂಖ್ಯಾತರ ಮತಗಳು ಜೆಡಿಎಸ್ ಪಕ್ಷದ ಪರವಾಗಿ ಬರುವಂತೆ ಮಾಡಬೇಕೆಂಬ ಗುರುತರ ಜವಾಬ್ದಾರಿ ನೀಡಲಾಗಿದೆ, ಅವರು ತಮಗೆ ನಿಗದಿಪಡಿಸುವ ಗುರಿ ತಲುಪಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಪಕ್ಷದಿಂದ ನೀಡಲಾದ ನೇಮಕಾತಿ ಪತ್ರ ಸ್ವೀಕರಿಸಿ ಮಾತನಾಡಿದ ಜೆಡಿಎಸ್ ಪಕ್ಷದ ಜಿಲ್ಲಾ ಹಿರಿಯ ಉಪಾಧ್ಯಕ್ಷ ಸುಲ್ತಾನ್ ಮೊಹಮದ್, ಕಳೆದ 35 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, 2007ರಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ, ತುಮಕೂರು ನಗರದಲ್ಲಿ ಸುಮಾರು 65 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ, ಹಾಗೆಯೇ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮುಸ್ಲಿಂ ಮತದಾರರ ಸಂಖ್ಯೆ ಗಣನೀಯವಾಗಿದೆ, ಈ ಹಿನ್ನೆಲೆಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕೆಂಬುದು ಪಕ್ಷದ ವರಿಷ್ಠರಲ್ಲಿ ನನ್ನ ಮನವಿಯಾಗಿದೆ, ನನಗೆ ಟಿಕೆಟ್ ನೀಡುವುದರಿಂದ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಜೆಡಿಎಸ್ ಪಕ್ಷದ ಪರವಾಗಿ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.
ಪಕ್ಷ ನನ್ನನ್ನು ಜಿಲ್ಲಾ ಹಿರಿಯ ಉಪಾಧ್ಯಕ್ಷನನ್ನಾಗಿ ನೇಮಿಸಿದೆ, ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ತನ್ವೀರ್ ಅಹಮದ್, ಪ್ರಧಾನ ಕಾರ್ಯದರ್ಶಿ ಬಾಬು ಅವರೊಂದಿಗೆ ಸೇರಿ ಇಡೀ ಜಿಲ್ಲೆಯಲ್ಲಿ ಪ್ರವಾಸ ಮಾಡಿ, ಮುಸ್ಲಿಂರ ಅತಿ ಹೆಚ್ಚು ಮತಗಳು ಜೆಡಿಎಸ್ ಪಕ್ಷದ ಪರವಾಗಿ ಬರುವಂತೆ ಪಕ್ಷ ಸಂಘಟಿಸುವುದಾಗಿ ಭರವಸೆಯನ್ನು ಸುಲ್ತಾನ್ ಮೊಹಮದ್ ನೀಡಿದರು.

Get real time updates directly on you device, subscribe now.

Comments are closed.

error: Content is protected !!