ಜಾರಾನುವಾರುಗಳ ಗಂಟುರೋಗ ನಿಯಂತ್ರಣಕ್ಕೆ ಕ್ರಮ

ಕುಣಿಗಲ್ ನಲ್ಲಿ ಪಶುಸಂಗೋಪನೆ ಸಚಿವ ಪ್ರಭುಚವಾಣ್ ಹೇಳಿಕೆ

163

Get real time updates directly on you device, subscribe now.


ಕುಣಿಗಲ್: ಜಾನುವಾರುಗಳಿಗೆ ಕಾಡುವ ಗಂಟುರೋಗ ನಿಯಂತ್ರಣಕ್ಕೆ ಪಶುಸಂಗೋಪನೆ ಇಲಾಖೆಯಿಂದ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರೈತರು ಪಶುಗಳಿಗೆ ಯಾವುದೇ ಸಮಸ್ಯೆ ಆದಲ್ಲಿ 1962 ಸಹಾಯವಾಣಿಗೆ ಕರೆ ಮಾಡಿ ಇಲಾಖೆ ನೆರವು ಪಡೆಯಬಹುದು ಎಂದು ಪಶುಸಂಗೋಪನೆ ಸಚಿವ ಪ್ರಭುಚವಾಣ್ ಹೇಳಿದರು.
ಪಟ್ಟಣದ ಅಶ್ವವರ್ಧನ ಕೇಂದ್ರ (ಸ್ಟಡ್ ಫಾರಂ) ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಡ್ಫಾರಂ ಜಾಗ ಇಲಾಖೆಯದ್ದಾಗಿದ್ದು ನಿರ್ವಹಣೆಗೆ ಖಾಸಗಿ ಸಂಸ್ಥೆಗೆ ನೀಡಲಾಗಿದೆ. ಗುತ್ತಿಗೆ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ಭೇಟಿ ನೀಡಲು ಆಗಮಿಸಿದ್ದು, ಈ ಸ್ಥಳ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಜ್ಞರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.
ರಾಜ್ಯಾದ್ಯಂತ ಗಂಟುರೋಗ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ರೋಗ ನಿಯಂತ್ರಣಕ್ಕೆ ಸೂಕ್ತ ವ್ಯಾಕ್ಸಿನ್ ಲಭ್ಯವಿದೆ. ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿಗಳು ವ್ಯಾಕ್ಸಿನ್ ಹಾಗೂ ಪರಿಹಾರ ಧನ ನೀಡಲು 13 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ರೋಗ ನಿಯಂತ್ರಣ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಎಲ್ಲಾ ಇಲಾಖಾಧಿಕಾರಿಗಳಿಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದರು.
ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ದೂರುಗಳಿವೆ. 400 ಪಶು ವೈದ್ಯರು ಸೇರಿದಂತೆ 300 ಮಂದಿ ಸಿಬ್ಬಂದಿ ನೇಮಕಾತಿಗೆ ಅಗತ್ಯ ಪ್ರಕ್ರಿಯೆ ನಡೆಸಲಾಗುತ್ತಿದೆ. ಪಶು ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿ ಕೆಲವರು ಕೋರ್ಟ್ ಮೆಟ್ಟಿಲು ಹತ್ತಿದ ಪರಿಣಾಮ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು.
ಹಾಲಿ ಇರುವ ನೌಕರರು ಸೇವಾಭದ್ರತೆ ನಿಟ್ಟಿನಲ್ಲಿ ಸಚಿವರು ಹಾಲಿ ಇರುವ ನೌಕರರು ಹಾಗೆ ಮುಂದುವರೆಯುತ್ತಾರೆ. ಈ ನಿಟ್ಟಿನಲ್ಲಿ ಯಾವುದೆ ಬದಲಾವಣೆ ಇಲ್ಲ. ಕುದುರೆ ಫಾರಂನ್ನು ಕುದುರೆ ಫಾರಂ ಆಗಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕದ ಬಗ್ಗೆ ಕಡತ ನಮ್ಮ ಮುಂದೆ ಬಂದಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇಲಾಖೆ ನಿರ್ದೇಶಕ ಕೃಷ್ಣಪ್ಪ, ಜಂಟಿ ನಿರ್ದೇಶಕ ಜಯಣ್ಣ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಬಲರಾಮ, ಪ್ರಧಾನ ಕಾರ್ಯದರ್ಶಿ ದೇವರಾಜು, ಸ್ಟಡ್ಫಾರಂನ ವ್ಯವಸ್ಥಾಪಕರು ಹಾಗೂ ಸ್ಥಳೀಯ ನೌಕರರ ವರ್ಗ ಹಾಜರಿದ್ದರು. ನೌಕರರು ಯಾವುದೇ ಸಂಸ್ಥೆ ಗುತ್ತಿಗೆ ಪಡೆದರೂ ಹಾಲಿ ಕೆಲಸ ಮಾಡುತ್ತಿರುವ 175 ಸಿಬ್ಬಂದಿಯ ಸೇವಾ ಭದ್ರತೆ ನಿಟ್ಟಿನಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಮನವಿ ಸಲ್ಲಿಸಿದರು.

Get real time updates directly on you device, subscribe now.

Comments are closed.

error: Content is protected !!