ತುಮಕೂರು: ಜೀವನದ ಸೋಲು ಗೆಲುವುಗಳ ದಾಟಿ ಯಶಸ್ಸು ಸಾಧಿಸುವ ಪ್ರೇರಣೆಯನ್ನು ಕ್ರೀಡೆಗಳು ಕಲಿಸುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸುದರ ಮೂಲಕ ಪ್ರತಿಯೊಬ್ಬರೂ ತಮ್ಮ ದೇಹ ಹಾಗೂ ಮನಸ್ಸನ್ನು ಸಧೃಡಗೊಳಿಸಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ-2022 ಉದ್ಘಾಟಿಸಿ ಮಾತನಾಡಿದರು.
ಪ್ರಪ್ರಥಮವಾಗಿ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಅಯೋಜಿಸಲಾಗಿದೆ. ರಾಜ್ಯದ ದೇಸಿ, ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಾದ ಕಬ್ಬಡಿ, ಖೋಖೋ, ಎತ್ತಿನ ಬಂಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರುವ ಕೆಲಸ ಮಾಡಿ ಎಂದು ಕರೆ ನೀಡಿದರು.
ಗ್ರಾಮೀಣ ಶೈಲಿಯ ಕ್ರೀಡೆಗಳಲ್ಲಿ ಭಾಗಿಯಾದ ಯುವಕ ಯುವತಿಯರು ಕ್ರೀಡಾಸ್ಫೂರ್ತಿ ಮೆರೆದರು.
ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಕ್ರೀಡಾಪಟುಗಳಿಗೆ ಶುಭ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಜಿಲ್ಲಾ ಪಂಚಾಯತ್ನ ಮುಖ್ಯಯೋಜನಾಧಿಕಾರಿ ಸಣ್ಣಮಸಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ರೇಷ್ಮೇ ಇಲಾಖೆಯ ಉಪ ನಿರ್ದೇಶಕ ರಾಮಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ನಾಗರಾಜ, ವಾಲಿಬಾಲ್ ತರಬೇತುದಾರ ಪ್ರದೀಪ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ, ಕ್ರೀಡಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
Comments are closed.