ತುಮಕೂರು ವಿವಿಯಲ್ಲಿ 18 ಪಠ್ಯಪುಸ್ತಕಗಳ ಲೋಕಾರ್ಪಣೆ

ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಕಲಿಯಲಿ: ಪ್ರೊ. ನಿರ್ಮಲ್ ರಾಜು

123

Get real time updates directly on you device, subscribe now.


ತುಮಕೂರು: ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ವಿಚಾರಗಳನ್ನು ಕಲಿತು ಅರಿತುಕೊಳ್ಳಬೇಕು ಎಂದು ತುಮಕೂರು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್ ರಾಜು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಹಾಗೂ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ವತಿಯಿಂದ ನವೆಂಬರ್ 30 ರಂದು ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರಕಾರ ಪದವಿ ತರಗತಿಗಳಿಗೆ ಸಿದ್ಧಪಡಿಸಲಾದ ಕನ್ನಡ ಪಠ್ಯಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ 18 ಪಠ್ಯಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಓದಿದ ವಿದ್ಯಾರ್ಥಿಗಳು ಬೆಂಗಳೂರಂತಹ ಮಹಾನಗರಗಳಲ್ಲಿ ಕೆಲಸಗಿಟ್ಟಿಸಿಕೊಳ್ಳುವ ಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ ಕನ್ನಡದಲ್ಲಿ ಅಭ್ಯಾಸ ಮಾಡುವವರ ಸಂಖ್ಯೆಯು ಕಮ್ಮಿಯಾಗುತ್ತಿದೆ ಎಂದರು.

ಹದಿನೆಂಟು ಪಠ್ಯಪುಸ್ತಕಗಳು ಒಟ್ಟಿಗೆ ಲೋಕಾರ್ಪಣೆಗೊಂಡಿರುವುದು ಬಹುಮುಖ್ಯ ಸಂಗತಿ. ವಿದ್ಯಾರ್ಥಿಗಳು ಆಧುನಿಕ ದೃಷ್ಟಿಕೋನಗಳಲ್ಲಿ ಆಲೋಚಿಸಿ, ಅಧ್ಯಯನ ಮಾಡುವ ಮೂಲಕ ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.
ವಿವಿಯ ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕ ಪ್ರೊ. ಡಿ. ವಿ. ಪರಮಶಿವಮೂರ್ತಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿದಂತೆ ಪಠ್ಯ ಪುಸ್ತಕಗಳ ತಯಾರಿ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪರಿಭಾಷೆಗಳ ಅಡಿಯಲ್ಲಿ ಪಠ್ಯಪುಸ್ತಕಗಳ ಜೋಡಣೆ ಅತಿಮುಖ್ಯ. ಭಾಷಾ ಸಾಹಿತ್ಯದ ಬೆಳವಣಿಗೆಯಲ್ಲಿ ಅಧ್ಯಾಪಕರು ಶ್ರಮಿಸಬೇಕು ಎಂದು ತಿಳಿಸಿದರು.

ಪ್ರಸಾರಾಂಗ ವಿಭಾಗದ ನಿರ್ದೇಶಕರು ಹಾಗೂ ಕನ್ನಡ ಪಠ್ಯಪುಸ್ತಕಗಳ ಪ್ರಧಾನ ಸಂಪಾದಕರಾದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಮಾತನಾಡಿ, ಪಠ್ಯಪುಸ್ತಕಗಳು ಕೇವಲ ಪಠ್ಯಕ್ಕೆ ಸಂಬಂಧಿಸಿಲ್ಲ. ಇದು ವಿದಾರ್ಥಿಗಳ ಮುಂದಿನ ಜೀವನಕ್ಕೆ ಅನುಕೂಲವಗಲಿದೆ. ಈ ಪಠ್ಯಪುಸ್ತಕ ರಚನೆಗೆ ತುಮಕೂರು ವಿವಿ ಕುಲಪತಿಗಳು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ ಎಂದರು.

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ. ಬೆಳೆಕೆರೆ ಲಿಂಗರಾಜಯ್ಯ, ತುಮಕೂರು ವಿವಿಯ ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷೆ ಪ್ರೊ. ಅಣ್ಣಮ್ಮ, ಪದವಿ ಕಾಲೇಜಗಳ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಡಿ ಶಿವನಂಜಯ್ಯ, ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಪಕ ಡಾ. ಓ ನಾಗರಾಜು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!