ತುಮಕೂರು: ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಅಂಗವಾಗಿ ಜನರಲ್ಲಿ ಏಡ್ಸ್ ತಡೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಜಾಥಾ ನಡೆಸಲಾಯಿತು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭವಾಗ ಏಡ್ಸ್ ಜನ ಜಾಗೃತಿ ಜಾಥಾಕ್ಕೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ
ಮಾತನಾಡಿ, ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ನಾವು ನಿಮ್ಮ ಬೆಂಬಲಕ್ಕೆ ಇದ್ದೇವೆ. ಯಾರು ಸಹ ಹೆದರಬಾರದು. ಈ ಕಾಯಿಲೆಗೆ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬೇಕು. ಬದುಕು ಎಲ್ಲರಿಗೂ ಬಹು ಮುಖ್ಯ, ಬದುಕಿ ಜೀವಿಸಬೇಕು ಎಂಬ ಉದ್ದೇಶದಿಂದ ಈ ಜಾಥಾ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಏಡ್ ನಿಯಂತ್ರಣಾಧಿಕಾರಿ ಡಾ. ಸನತ್ಕುಮಾರ್ ಮಾತನಾಡಿ, ಏಡ್ ಬಾಧಿತರಿಗೆ ಬೆನ್ನೆಲುಬಾಗಿ ನಿಲ್ಲುತ್ತೇವೆ. ನಾವು ನಿಮ್ಮ ಬೆಂಬಲಕ್ಕೆ ಇದ್ದೇವೆ ಎಂಬುದನ್ನು ಘೋಷಣೆ ಮೂಲಕ ಸಾರುವುದು ಈ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಏಡ್ಸ್ನಿಂದ ಆಗುವ ಅನಾನುಕೂಲ, ತೊಂದರೆಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿ ಈ ಮಾರಕ ರೋಗದ ಪ್ರಮಾಣವನ್ನು ಶೂನ್ಯಕ್ಕೆ ತರುವ ಸಂಕಲ್ಪ ಮಾಡಲಾಗಿದೆ. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ವೈರಸ್ ಹರಡುವುದನ್ನು ತಡೆಗಟ್ಟಿದರೆ ಏಡ್ ಮಾರಕ ರೋಗ ತಡೆಗಟ್ಟಬಹುದಾಗಿದೆ ಎಂದರು.
ನಂತರ ಈ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಏಡ್ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಇರ್ಫಾನ್, ಡಿಹೆಚ್ಓ ಡಾ. ಮಂಜುನಾಥ್, ಐಎಂಎ ಅಧ್ಯಕ್ಷ ಡಾ. ಚಂದ್ರಶೇಖರ್, ಎನ್ಜಿಓ ಸದಸ್ಯರು, ರಕ್ತನಿಧಿ ಕೇಂದ್ರದ ಪ್ರತಿನಿಧಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Comments are closed.