ಕುಣಿಗಲ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮೂರು ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ವಡ್ಡರಾಳು ಗ್ರಾಮದ ಶ್ರೀನಿವಾಸ್ ಗೌಡ ಎಂಬುವರಿಗೆ ಸೇರಿದ ಮೂರು ಎಕರೆ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತೀರಾ ಕೆಳಗಿದ್ದು, ಅವನ್ನು ದುರಸ್ತಿಗೊಳಿಸುವಂತೆ ರೈತ ಹಲವಾರು ಬಾರಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.
ಆದರೆ ಇಲಾಖಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಕಾರಣ ವಿದ್ಯುತ್ ಪೂರೈಕೆ ತಂತಿಗಳು ಕಬ್ಬಿನ ಬೆಳೆಯ ಮಧ್ಯದಲ್ಲೇ ತೀರಾ ಕೆಳಗೆ ಹಾದು ಹೋಗಿದ್ದು, ಗುರುವಾರ ಮಧ್ಯಾಹ್ನ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಹಾಗೂ ತೆಂಗಿನ ಮರಗಳು ಸುಟ್ಟು ಕರಕಲಾಗಿದೆ.
ಬೆಂಕಿ ನಿಯಂತ್ರಿಸಲು ಸಂಬಂಧ ಪಟ್ಟ ಇಲಾಖೆಗೆ ಕರೆ ಮಾಡಿದರು ತುರ್ತಾಗಿ ಸ್ಪಂದಿಸದೆ ವಿಳಂಬ ಮಾಡಿದ ಕಾರಣ ಇಡೀ ಬೆಳೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ ಎಂದು ಆರೋಪಿಸಿದ ರೈತ ಶ್ರೀನಿವಾಸಗೌಡ, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೆಸ್ಕಾಂ ಇಲಾಖೆ ನಿರ್ಲಕ್ಷ್ಯವೆ ಘಟನೆಗೆ ಕಾರಣ ಎಂದು ಆರೋಪಿಸಿ ಹುಲಿಯೂರು ದುರ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
Comments are closed.