ಮಹಿಳೆ, ಮಕ್ಕಳ ಹಕ್ಕುಗಳ ಬಗ್ಗೆ ತಿಳುವಳಿಕೆ ಅಗತ್ಯ

76

Get real time updates directly on you device, subscribe now.


ತುಮಕೂರು: ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಸರಿಯಾಗಿ ಅರ್ಥ ಮಾಡಿಕೊಂಡಲ್ಲಿ ಶೋಷಿತರಿಗೆ ನ್ಯಾಯ ಕೊಡಲು ಮತ್ತು ಕೊಡಿಸಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಜಿಲ್ಲಾ ಮತ್ತು ಸತ್ರ ನ್ಯಾಯಮೂರ್ತಿ ಹೆಚ್.ಎ.ಮೋಹನ್ ಕಾನೂನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ರಾಜ್ಯ ಮಾನವ ಹಕ್ಕುಗಳ ಆಯೋಗ, ವಿದ್ಯೋದಯ ಕಾನೂನು ಕಾಲೇಜು ಹಾಗೂ ನಚಿಕೇತ್ ಅಗ್ನಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ವಿದ್ಯೋದಯ ಕಾನೂನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ- 2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾನವನ ಅತಿಯಾದ ಆಸೆ, ದುರಹಂಕಾರದ ವರ್ತನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ನಾಡಗೀತೆಯಲ್ಲಿನ ಪ್ರತಿ ಸಾಲುಗಳನ್ನು ಸರಿಯಾಗಿ ನಾವು ಅರ್ಥ ಮಾಡಿಕೊಂಡರೆ ಮಾನವ ಹಕ್ಕುಗಳ ತಿಳುವಳಿಕೆ ಮೂಡುತ್ತದೆ. ಸಾಮಾಜಿಕ ಜಾಲ ತಾಣಗಳನ್ನು ಒಳ್ಳೆಯ ವಿಷಯಗಳ ಜ್ಞಾನಾರ್ಜನೆಗೆ ಹೆಚ್ಚು ಬಳಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಅವರ ಹಕ್ಕುಗಳು ನ್ಯಾಯಯುತವಾಗಿ ದೊರಕಬೇಕು. ಇವರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಾನೂನಿನಲ್ಲಿ ಹಲವು ರೀತಿಯ ಅವಕಾಶಗಳಿವೆ. ಯಾವುದೇ ಪ್ರಕರಣ ನೋಡುವಾಗ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ನ್ಯಾಯ ಪರಾಮರ್ಶಿಸಬೇಕು . ಆಗ ಪ್ರಕರಣ ಬಗೆಹರಿಸಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.

ವಿದ್ಯೋದಯ ಕಾನೂನು ಕಾಲೇಜಿನಲ್ಲಿನ ತಮ್ಮ ವಿದ್ಯಾರ್ಥಿ ದಿಸೆಯ ದಿನಗಳನ್ನು ಅವರು ಮೆಲುಕು ಹಾಕಿದರು.

ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎ.ನಾರಾಯಣಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಸುರೇಂದ್ರ ಕುಮಾರ್ ಉಪನ್ಯಾಸ ನೀಡಿದರು.
ವಿದ್ಯೋದಯ ಪ್ರತಿಷ್ಠಾನದ ನಿರ್ದೇಶಕ ಹೆಚ್.ಎಸ್.ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಸಂಯೋಜಕ ನಟರಾಜ್.ಜೆ.ವೈ, ನಚಿಕೇತ್, ಅಗ್ನಿ ಫೌಂಡೇಶನ್ ಅಧ್ಯಕ್ಷ ಟಿ.ಕೆ.ಜಯರಾಮ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!