ಗುಬ್ಬಿಗೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಯಾತ್ರೆ

140

Get real time updates directly on you device, subscribe now.


ಗುಬ್ಬಿ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಯಾತ್ರೆಯು ತಾಲ್ಲೂಕಿಗೆ ಆಗಮಿಸಿದ ಸಂದರ್ಭದಲ್ಲಿ ನಿಟ್ಟೂರು ಮತ್ತು ಗುಬ್ಬಿ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸಾಹಿತ್ಯ ಅಭಿಮಾನಿಗಳು ಹಾಗೂ ಭಾಷಾಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಯತೀಶ್ ಮಾತನಾಡಿ, ಕನ್ನಡನಾಡಿನ ಭಾಷೆ, ಸಂಸ್ಕೃತಿ, ಇತಿಹಾಸ, ಪರಂಪರೆಗಳ ಪ್ರತೀಕವಾಗಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸಲು ಎಲ್ಲರೂ ಸಹಕರಿಸಬೇಕಿದೆ. ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಂಡಾಗ ಮಾತ್ರ ನಾಡನ್ನು ಉಳಿಸಿ, ರಕ್ಷಿಸಲು ಸಾಧ್ಯವಾಗುತ್ತದೆ. ಕನ್ನಡತನ ಉಳಿಸಿ ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ ತಿಂಗಳ 22 ರಂದು ಚೇಳೂರಿನಲ್ಲಿ ನಡೆಯುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಕಸಾಪ ಜಿಲ್ಲಾ ಘಟಕದ ಸಂಚಾಲಕ ಯೋಗಾನಂದ್ ಮಾತನಾಡಿ ಸಾಹಿತ್ಯ ಸಮ್ಮೇಳನ ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿದೆ. ಸಾಹಿತ್ಯ ಪರಿಷತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದ್ದು, ಆನ್ಲೈನ್ ಮೂಲಕವೇ ಸದಸ್ಯರಾಗಲು ಹಾಗೂ ಸಮ್ಮೇಳನದ ಪ್ರತಿನಿಧಿಗಳಾಗಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಜೊತೆಗೆ ತಾಲ್ಲೂಕು ಹಾಗೂ ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಸಾಹಿತಿಗಳು, ಕನ್ನಡ ಅಭಿಮಾನಿಗಳು ಮುಂದೆ ಬರಬೇಕಾಗಿದೆ. ಎಲ್ಲರೂ ಸೇರಿ ಕನ್ನಡ ಡಿಂಡಿಮ ಬಾರಿಸುತ್ತಾ, ಕನ್ನಡದ ತೇರನ್ನು ಎಳೆಯೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಘಟಕದ ಉಪಾಧ್ಯಕ್ಷ ದಯಾನಂದ ಸರಸ್ವತಿ, ಕಸಾಪ ನಿಟ್ಟೂರು ಹೋಬಳಿ ಘಟಕದ ಅಧ್ಯಕ್ಷ ಜಯಪ್ರಕಾಶ್, ತಾಲ್ಲೂಕು ಘಟಕದ ಕಾರ್ಯದರ್ಶಿ ಕುಮಾರಸ್ವಾಮಿ, ಖಜಾಂಚಿ ಸುಬ್ರಹ್ಮಣ್ಯ, ಪದಾಧಿಕಾರಿಗಳಾದ ರವೀಶ್, ಜಗದೀಶ್, ಕನ್ನಡ ಅಭಿಮಾನಿಗಳು, ಶಾಲಾ ಮಕ್ಕಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!