ಡಿ.15, 16 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

162

Get real time updates directly on you device, subscribe now.


ತುಮಕೂರು: ನಗರದ ಗಾಜಿನ ಮನೆ ಆವರಣದಲ್ಲಿ ಡಿಸೆಂಬರ್ 15 ಮತ್ತು 16 ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಮ್ಮೇಳನ ನಡೆಯುತ್ತದೆ. ಸಾಹಿತಿ ಎಂ.ವಿ. ನಾಗರಾಜರಾವ್ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಅಜಯ್ ಡಿ.15 ರಂದು ಬೆಳಗ್ಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆ.8.30ಕ್ಕೆ ಸಮ್ಮೇಳನಾಧ್ಯಕ್ಷರನ್ನು ವೇದಿಕೆಗೆ ಬರಮಾಡಿಕೊಳ್ಳಲಾಗುವುದು. ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ಉದ್ಘಾಟನಾ ಸಮಾರಂಭ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಟಿ.ಎಸ್.ನಾಗಾಭರಣ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಮುಖ ವೇದಿಕೆಗೆ ಡಾ. ಶಿವಕುಮಾರ ಮಹಾ ಸ್ವಾಮೀಜಿ ಹೆಸರಿಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಎಂ.ವಿ. ನಾಗರಾಜರಾವ್ ಮಾತನಾಡಲಿದ್ದಾರೆ. ಮಧ್ಯಾಹ್ನ 12.45ಕ್ಕೆ ತುಮಕೂರು ಜಿಲ್ಲೆ ಅಭಿವೃದ್ಧಿ ಆಯಾಮಗಳು ಸಂವಾದ ಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ದಿಶಾ ಸಮಿತಿ ಹಾಗೂ ಜಿಲ್ಲಾ ವಿದ್ಯುಚ್ಚಕ್ತಿ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿಸೆಂಬರ್ 16ರ ಬೆಳಗ್ಗೆ 11.45 ರಿಂದ 01 ಗಂಟೆವರೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಳಿಕ ಬಹಿರಂಗ ಅಧಿವೇಶನ ನಡೆಯಲಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದರಾದ ಜಿ.ಎಸ್.ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ.
ನಾಡಿನ ಪ್ರಮುಖ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಡೋಜ ಡಾ.ಮಹೇಶ್ ಜೋಷಿ ಸಾಧಕರನ್ನು ಗೌರವಿಸಲಿದ್ದಾರೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!