ಕುಣಿಗಲ್: ಕೊಬ್ಬರಿ ಹಾಗೂ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಿಗೆ ಮನವಿ ನೀಡಿದ ಆಗ್ರಹಿಸಿದ್ದಾರೆ.
ಶುಕ್ರವಾರ ನವದೆ ಹಲಿಯ ಕೃಷಿ ಭವನದಲ್ಲಿ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇ ಗೌಡರು ಕಳೆದ ಕೆಲ ದಿನಗಳಿಂದ ಅಡಿಕೆ ಮತ್ತು ಕೊಬ್ಬರಿ ಬೆಲೆಯಲ್ಲಿ ತೀವ್ರ ಇಳಿಮುಖವಾಗಿ ಬೆಳೆ ಬೆಳೆದ ರೈತರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ನಷ್ಟಕ್ಕೆ ಒಳಗಾದ ರೈತರ ನೆರವಿಗೆ ತುರ್ತಾಗಿ ಧಾವಿಸುವಂತೆ ಆಗ್ರಹಿಸಿರುವ ಅವರು ಕೊಬ್ಬರಿಗೆ ಕೇಂದ್ರ ಸರ್ಕಾರವೂ ಹದಿನೈದು ಸಾವಿರ ದರ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಅಡಿಕೆ ಬೆಳೆಗಾರರ ರಕ್ಷಣೆ ನಿಟ್ಟಿನಲ್ಲೂ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.
ಮನವಿಗೆ ಪೂರಕವಾಗಿ ಸ್ಪಂದಿಸುವುದಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರು ಭರವಸೆ ನೀಡಿದ್ದಾರೆಂದು ಹೇಳಿದ್ದಾರೆ.
Comments are closed.