ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

127

Get real time updates directly on you device, subscribe now.


ತುಮಕೂರು: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್ ರವಿಶಂಕರ್ ಹೆಬ್ಬಾಕ ಅವರ ಸಮ್ಮುಖದಲ್ಲಿ ನಗರದ 25, 30, 31 ಹಾಗೂ 35ನೇ ವಾರ್ಡ್ನ ಅನೇಕ ಜನರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆದ ನಂತರ ಸಾಕಷ್ಟು ಬದಲಾವಣೆಗಳಾಗಿವೆ. ಸತತ ಏಂಟು ವರ್ಷಗಳ ಕಾಲ ಸುದೀರ್ಘ ದೇಶದ ಅಭಿವೃದ್ಧಿಗೆ ಶ್ರಮಿಸಿದ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ಹಾಗೂ ಯೋಜನೆ ದೇಶದ ಕೊನೆಯ ಪ್ರಜೆಗೂ ತಲುಪಿಸುವ ನಿಟ್ಟಿನಲ್ಲಿ ಅವರ ಕಾರ್ಯ ವೈಖರಿ ಎಲ್ಲರಿಗೂ ಮಾರ್ಗದರ್ಶನವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ರಾಜ್ಯ ಬಿಜೆಪಿ ಸರ್ಕಾರ ಅನುಷ್ಠಾನ ಗೊಳಿಸುತ್ತಿದ್ದು, ಎಲ್ಲರ ಅಭಿವೃದ್ಧಿಯ ಹೊಣೆಯನ್ನು ಬಿಜೆಪಿ ಸರ್ಕಾರ ಹೊತ್ತಿದೆ ಎಂದರು.

ದೇಶದಲ್ಲಿ ಅತೀ ಹೆಚ್ಚು ಸಂಸತ್ ಸದಸ್ಯರನ್ನು ಹೊಂದುವುದರ ಮೂಲಕ ಪ್ರಪಂಚದಲ್ಲಿಯೇ ಒಂದು ಇತಿಹಾಸವನ್ನು ಬಿಜೆಪಿ ಸೃಷ್ಟಿಸಿದೆ. ಇಡೀ ದೇಶಾದ್ಯಂತ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿರುವ ಏಕೈಕ ಪಾರ್ಟಿ ನಮ್ಮ ಬಿಜೆಪಿ ಪಕ್ಷ, ಅದೇ ರೀತಿ ಕಾಂಗ್ರೆಸ್ ಪಕ್ಷವು ಬಡವರು ಹಾಗೂ ರೈತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದ್ದು ಅವರ 70 ವರ್ಷಗಳ ಅಭಿವೃದ್ಧಿ ಶೂನ್ಯ. ಇದರಿಂದ ಬೇಸತ್ತ ಜನರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಪ್ರಧಾನಿ ನರೇಂದ್ರ ಮೋದಿಯವರ ಬಲವನ್ನು ಹೆಚ್ಚಿಸುತ್ತಿದ್ದಾರೆ ಎಂದರು.

ಕೊರೊನಾ ಸಂದರ್ಭದಲ್ಲಿ ಭಾರತದ ಕಟ್ಟು ನಿಟ್ಟಿನ ಕ್ರಮದಿಂದಾಗಿ ಕೊರೊನಾ ಸೋಂಕನ್ನು ತಡೆಗಟ್ಟಿದವರು ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು. ಆದ್ದರಿಂದ ಡಬ್ಲ್ಯೂಹೆಚ್ಓ ಪ್ರಪಂಚದ ಎಲ್ಲಾ ದೇಶಗಳ ಮುಂದೆ ಭಾರವನ್ನು ವರ್ಣಿಸಿದೆ ಎಂದರು.
ನರೇಂದ್ರ ಮೋದಿಯವರ ಕಾರ್ಯಕ್ರಮ ಹಾಗೂ ಯೋಜನೆ ಬೆಂಬಲಿಸಿದ ಜನರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ 7 ಬಾರಿ ಅಂದರೆ 35 ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟರುವುದೇ ಅತ್ಯುತ್ತಮ ಸಾಕ್ಷಿ ಎಂದರು.
ಕಾಂಗ್ರೆಸ್ ಪಕ್ಷದವರಿಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ಬಡವರು ಹಾಗೂ ರೈತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡು ಬಂದಿದ್ದು ಅವರ ಕಾಲಾವಧಿಯಲ್ಲಿ ಅಭಿವೃದ್ಧಿ ಎಂಬುದೇ ಇರಲಿಲ್ಲ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜರಿಗೆ ತಂದ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳು ದೇಶದ ಕಡುಬಡವನಿಗೂ ಸಹಾಯ ಆಗಿವೆ. ಇದರಿಂದ ಜನರು ಬಿಜೆಪಿ ಪಕ್ಷ ಬೆಂಬಲಿಸುತ್ತಿದ್ದಾರೆ ಎಂದರು.
ತುಮಕೂರು ನಗರದ ಸ್ಮಾರ್ಟ್ ಸಿಟಿ ಯೋಜನೆಗೆ 1 ಸಾವಿರ ಕೋಟಿ ಹಣ ಬಿಡುಗಡೆ ಮಾಡುವುದರ ಮೂಲಕ ನಗರದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಹಾಗೂ 32 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇದು ನರೇಂದ್ರ ಮೋದಿಯವರ ಕೊಡುಗೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಟುಡಾ ಸದಸ್ಯ ಹನಮಂತಪ್ಪ.ಎನ್, ಮಾಜಿ ಸದಸ್ಯ ಜೆ.ಜಗದೀಶ್, ಮಾಜಿ ಟೂಡಾ ಅಧ್ಯಕ್ಷ ಬಿ.ಎಸ್.ನಾಗೇಶ್, ಮಹಾನಗರ ಪಾಲಿಕೆ ಸದಸ್ಯ ಸಿ.ಎನ್.ರವೀಶ್, ಮಂಜುಳಾ ಆದರ್ಶ್, ಜಿಲ್ಲಾ ಉಪಾಧ್ಯಕ್ಷೆ ನಾಗರತ್ನಮ್ಮ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ರುದ್ರೇಶ ಎಂ.ವೈ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಹೆಚ್.ಎಂ.ರವೀಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!