ಅಪರಿಚಿತ ಶವ ಪತ್ತೆ

277

Get real time updates directly on you device, subscribe now.


ಕುಣಿಗಲ್: ಪಟ್ಟಣದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.

ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಪಕ್ಕದ ನಿರ್ಮಾಣ ಹಂತದ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ಅಪರಿಚಿತ ಪುರುಷನ ಶವ ಇರುವುದನ್ನು ಕಂಡು ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತನು ಅಂದಾಜು 50 ವರ್ಷ ಮೇಲ್ಪಟ್ಟ ವಯಸ್ಸಿನವನಾಗಿದ್ದು, ಆತನ ಬಗ್ಗೆ ಯಾವುದೇ ವಿವರ ಲಭ್ಯವಿಲ್ಲ. ಸಾರ್ವಜನಿಕರ ಬಳಿ ಯಾವುದೇ ಮಾಹಿತಿ ಇದ್ದಲ್ಲಿ ಹಾಗೂ ತಮ್ಮ ನೆರೆ ಹೊರೆಯಲ್ಲಿ ಯಾರಾದರೂ ಕಾಣೆಯಾಗಿದ್ದಲ್ಲಿ ಕುಣಿಗಲ್ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!