ತುಮಕೂರು: ಮಾಜಿ ಸೈನಿಕರ ಸಂಘದ ವಾರ್ಷಿಕೋತ್ಸವ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರಶಸ್ತಿ ಪುರಸ್ಕಾರ, ತುಮಕೂರು ರತ್ನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಡಾ.ಎನ್.ಕೆ.ಶಿವಣ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಕೋತಿ ತೋಪಿನಲ್ಲಿರುವ ಕುಂಚಿಟಿಗ ಸಮುದಾಯ ಭವನದಲ್ಲಿ ಜ.12 ರಂದು ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿ, ಅಖಿಲ ಭಾರತ ಮಾಜಿ ಸೈನಿಕರು ತುಮಕೂರು ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದು, ರಾಮಕೃಷ್ಣ ಮಠದ ಡಾ.ವೀರೇಶಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಜ್ಯೋತಿಗಣೇಶ್, ನಿವೃತ್ತ ಕರ್ನಲ್ ಬಸವರಾಜು, ಸವಿವರಾದ ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ಮಾಧುಸ್ವಾಮಿ, ಮಾಜಿ ಡಿಸಿಎಂ ಡಾ.ಪರಮೇಶ್ವರ್, ಶಾಸಕ ಗೌರಿಶಂಕರ್, ಆರ್.ರಾಜೇಂದ್ರ, ಸಂಸದ ಜಿ.ಎಸ್.ಬಸವರಾಜು, ಮಾಜಿ ಸಂಸದ ಮುದ್ದಹನುಮೇಗೌಡ, ಮೇಯರ್ ಪ್ರಭಾವತಿ, ಮಾಜಿ ಶಾಸಕ ಸುರೇಶ್ಗೌಡ, ರಫಿಕ್ ಅಹಮದ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಯುವಕರಲ್ಲಿ ದೇಶಪ್ರೇಮ ಮೂಡಿಸಲು ಮತ್ತು ದೇಶ ಸೇವೆ ಮಾಡಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರ ಧ್ವಜ ಪಥ ಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಸೇನೆಯಲ್ಲಿ ಸೇವೆ ಸಲ್ಲಿಸಿ ವಿವಿಧ ಕ್ಷೇತ್ರದಲ್ಲಿರುವವರನ್ನು ಗುರುತಿಸಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ತುಮಕೂರು ರತ್ನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿಯ ಅಧ್ಯಕ್ಷ ಪಾಂಡುರಂಗ, ಉಪಾಧ್ಯಕ್ಷ ಬಿ.ಲಿಂಗಣ್ಣ, ಕಾರ್ಯಾಧ್ಯಕ್ಷ ನಾಗರಾಜಯ್ಯ, ಪ್ರಧಾನ ಕಾರ್ಯದರ್ಶಿ ವೆಂಕಟರಮಣ ಸ್ವಾಮಿ, ಖಜಾಂಚಿ ನಟರಾಜ, ಸತ್ಯನಾರಾಯಣ, ಮುಖಂದ್ರಾಜ್, ಸುದರ್ಶನ್, ರಾಜಣ್ಣ, ಲಕ್ಷ್ಮಯ್ಯ, ಪುಟ್ಟಬಾಲಯ್ಯ ಪ್ರಸನ್ನ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
Comments are closed.