ಜನತಾ ನ್ಯಾಯಾಲಯ ಆಂದೋಲನ ಫೆ.11ಕ್ಕೆ: ನ್ಯಾ.ಕೆ.ಬಿ.ಗೀತಾ

123

Get real time updates directly on you device, subscribe now.


ತುಮಕೂರು: ಜನತಾ ನ್ಯಾಯಾಲಯದಲ್ಲಿ ನೀಡಲಾದ ತೀರ್ಪುಗಳು ಅಂತಿಮವಾಗಿದ್ದು, ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಪಕ್ಷಗಾರರಿಗೆ ತ್ವರಿತವಾಗಿ ತೀರ್ಪು ದೊರಕುವುದರಿಂದ ಅವರು ನ್ಯಾಯಾಲಯಗಳಿಗೆ ಪದೇ ಪದೆ ಎಡತಾಕುವುದು ತಪ್ಪುತ್ತದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ತಿಳಿಸಿದರು.

ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ಮಾಹಿತಿ ನೀಡಲು ಜಿಲ್ಲಾ ನ್ಯಾಯಾಲಯದ ವಿಸಿ ಹಾಲ್ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತುಮಕೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಫೆ. 11 ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಂಡಿದ್ದು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜಿ ಸಂಧಾನಗಳ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲಾಗುವುದು ಎಂದು ಹೇಳಿದರು.
12-11- 2022 ರಂದು ನಡೆದ ಲೋಕ್ ಅದಾಲತ್ ಆಂದೋಲನದಲ್ಲಿ ನ್ಯಾಯಾಲಯದಲ್ಲಿ ಚಾಲ್ತಿ ಇದ್ದಂತಹ 2,479 ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 1,51,097 ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಮೋಟಾರು ವಾಹನ ಅಪಘಾತಗಳಿಗೆ ಸಂಬಂಧಿಸಿದ 129 ಪ್ರಕರಣ ತೀರ್ಮಾನವಾಗಿ 1,43,3500 ರೂ. ಪರಿಹಾರ ಹಣ ವಿತರಿಸಲಾಗಿದೆ ಎಂದು ತಿಳಿಸಿದರು.

ಬರುವ ಫೆ. 11 ರಂದು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಎಲ್ಲಾ ರೀತಿಯ ರಾಜಿ ಆಗಬಹುದಾದ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಿದ್ದು, ಪಕ್ಷದಾರರ ಮಧ್ಯೆ ಇರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚುತ್ತದೆ ಮತ್ತು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ. ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

ಅತ್ಯಂತ ಅಪರೂಪದ ಪ್ರಕರಣಗಳಿಗೆ ಮಾತ್ರ ಮೇಲಿನ ನ್ಯಾಯಾಲಯಗಳಿಗೆ ಅಪೀಲು ಹೋಗಬಹುದೇ ಹೊರತು ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜನತಾ ನ್ಯಾಯಾಲಯಗಳಲ್ಲಿ ನೀಡುವ ತೀರ್ಪೇ ಅಂತಿಮವಾಗಿರುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಇದ್ದರು.

Get real time updates directly on you device, subscribe now.

Comments are closed.

error: Content is protected !!