ಸಿರಿಧಾನ್ಯ ಆಹಾರ ಸೇವಿಸಿ ಆರೋಗ್ಯವಂತರಾಗಿ

ರೈತರು ಸಿರಿಧಾನ್ಯ ಬೆಳೆಯಲು ಆಸಕ್ತಿ ಹೊಂದಲಿ: ವೈ.ಎಸ್.ಪಾಟೀಲ್

87

Get real time updates directly on you device, subscribe now.


ತುಮಕೂರು: ದಿನನಿತ್ಯದ ಆಹಾರಕ್ಕಿಂತಲೂ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ರೈತ ಬಂಧುಗಳಿಗಾಗಿ ಶುಕ್ರವಾರ ನಗರದ ಬಾಲಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಿರಿಧಾನ್ಯಗಳು ನಮ್ಮ ದೇಶದ ಪಾರಂಪರಿಕ ಬೆಳೆಯಾಗಿದ್ದು, ಪುರಾತನ ಅಧ್ಯಯನದ ವರದಿಯನ್ವಯ ಕ್ರಿ.ಪೂ.4500 ವರ್ಷಗಳ ಹಿಂದೆಯೇ ಬಳಕೆಯಲ್ಲಿತ್ತು. ಒಣಭೂಮಿ ಬೆಳೆಯಾಗಿರುವುದರಿಂದ ಸಿರಿಧಾನ್ಯಗಳನ್ನು ಕಡಿಮೆ ಮಳೆ ಪ್ರದೇಶಗಳಲ್ಲಿ ಬೆಳೆಯಬಹುದಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆ ಬೆಳೆಯಲು ವಾತಾವರಣ ಪೂರಕವಾಗಿದೆ. ರೈತರು ವಾಣಿಜ್ಯ ಬೆಳೆ ಬೆಳೆಯುವುದರೊಂದಿಗೆ ಸಿರಿಧಾನ್ಯ ಬೆಳೆಯಲು ಆಸಕ್ತಿ ತೋರಬೇಕು. ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ಸರ್ಕಾರದಿಂದ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿ.ಪಾಪಣ್ಣ, ಜಂಟಿ ಕೃಷಿ ನಿರ್ದೇಶಕ ಕೆ.ಹೆಚ್.ರವಿ, ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋವಿಂದರಾಜು, ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಜಿ.ಕೆ.ಅನಸೂಯ ಕಳಸೇಗೌಡ, ನಬಾರ್ಡ್ ಬ್ಯಾಂಕಿನ ಎಜಿಎಂ ಕೀರ್ತಿಪ್ರಭ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಬಾಲಕೃಷ್ಣ, ಕೃಷಿಕ ಸಮಾಜದ ವಿವಿಧ ತಾಲ್ಲೂಕಿನ ಪ್ರತಿನಿಧಿಗಳಾದ ಹನುಮಂತೇಗೌಡ, ಸಿದ್ಧರಾಮೇಶ್ವರ, ಚೆನ್ನಲಿಂಗಣ್ಣ, ರಂಗಸ್ವಾಮಿ, ನಾಗಣ್ಣ, ಜಿ.ಕೆ.ಕುಮಾರ್, ತ್ಯಾಗರಾಜ್, ರಾಜಶೇಖರ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!