ತುಮಕೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸ್ಥಳೀಯರಾಗಿರುವ ಎ.ಡಿ.ನರಸಿಂಹರಾಜು ಅವರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವೇದಿಕೆ ಅಧ್ಯಕ್ಷ ಹಾಗೂ ವಕೀಲ ರಜಿನಿಕಾಂತ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 2008 ರಿಂದಲೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳಿಲ್ಲ. ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಕಾರಣ ಸ್ಥಳೀಯರಲ್ಲದ ವ್ಯಕ್ತಿಗಳಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಟಿಕೆಟ್ ನೀಡುವುದರಿಂದ ಚುನಾವಣೆಯಿಂದ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವವರ ಸಂಖ್ಯೆ ಕುಸಿದಿದೆ. ಹಾಗಾಗಿ ಪಕ್ಷ ಈ ಬಾರಿ ಸ್ಥಳೀಯರನ್ನು ಅಭ್ಯರ್ಥಿಯನ್ನಾಗಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷ ಸಹ ಸಧೃಡವಾಗಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಆಲೋಚಿಸಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರಾದ ಹಬ್ಬತ್ತನಹಳ್ಳಿ ಶ್ರೀನಿವಾಸ್, ಗುರುಪ್ರಸಾದ್, ಪಾಂಡರಂಗಯ್ಯ, ಎನ್.ಕೆ.ನಿಧಿಕುಮಾರ್, ಲಕ್ಷ್ಮಿದೇವಮ್ಮ, ಮಂಜುನಾಥ್ ಇತರರು ಇದ್ದರು.
Comments are closed.