ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

13,571

Get real time updates directly on you device, subscribe now.


ತುಮಕೂರು: ಜಿಲ್ಲೆಯ ತಿಪಟೂರು ಹಾಗೂ ಕುಣಿಗಲ್ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಕಾಡುಶೆಟ್ಟಿಹಳ್ಳಿ- ಕರಡಾಳು ಬಳಿ ಗುರುವಾರ ರಾತ್ರಿ ಬೈಕ್ ಗೆ ವಾಹನ ಗುದ್ದಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಾಂತನಹಳ್ಳಿ ಗ್ರಾಮದ ಸದಾಶಿವಯ್ಯ (62) ಮೃತಪಟ್ಟವರು. ನೊಣವಿನಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ನಾಗೇಗೌಡನಪಾಳ್ಯದ ಸಮೀಪ ಸಂಭವಿಸಿದೆ. ಚನ್ನರಾಯಪಟ್ಟಣ ತಾಲ್ಲೂಕು ಗಂಡಸಿ ಹೋಬಳಿ ಚೌಡಿಕುಪ್ಪೆ ಗ್ರಾಮದ ಅಭಿಷೇಕ್ (25) ಮೃತರು. ಕಾಮತ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದು, ಎಡೆಯೂರಿಗೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!