ಮಧುಗಿರಿ: ಜಮೀನು ಭೂ ಪರಿವರ್ತನೆ ವಿಚಾರಕ್ಕೆ ಸಂಬಂಧಿಸಿದಂತೆ ಮಧುಗಿರಿ ಕಸಬಾ ಕಂದಾಯಾಧಿಕಾರಿ ಸಿದ್ದರಾಜು ಅವರನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಮಾನತು ಮಾಡಿ ಆದೇಶಿಸಿದ್ದಾರೆ.
ಪಟ್ಟಣದ ಸಿದ್ದಾಪುರ ಗ್ರಾಮದ ಸರ್ವೆ ನಂ. 124 ರಲ್ಲಿ 33 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರು. ಸದರಿ ಜಮೀನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಮೀನು ಪರಬಾರೆ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರುತ್ತಿದ್ದರೂ ಈ ಜಮೀನು ಪಿಟಿಸಿಎಲ್ ವ್ಯಾಪ್ತಿಗೆ ಬರುವುದಿಲ್ಲ ವರದಿ ನೀಡಿದ್ದರು.
ಪ್ರಾಮಿಕ ವರದಿಯಂತೆ ಈ ಜಮೀನು ಮಂಜೂರು ಜಮೀನಾಗಿರುವುದರಿಂದ ತನಿಖೆ ನಡೆಸುವಂತೆ ಸೂಚಿಸಿ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ.
Comments are closed.