ಬೆಳೆ ವಿಮೆ, ರಾಗಿ ಖರೀದಿ ಕೇಂದ್ರಕ್ಕೆ ರೈತರ ಆಗ್ರಹ

139

Get real time updates directly on you device, subscribe now.


ಕೊರಟಗೆರೆ: ರೈತರ ಬೆಳೆಯ ರಕ್ಷಣೆಗೆ ಬೆಳೆವಿಮೆ ಮತ್ತು ಕೃಷಿ ಬೆಳೆ ವಹಿವಾಟಿಗೆ ರಾಗಿ ಖರೀದಿ ಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಕುಮಾರಣ್ಣ ಉತ್ತರ ನೀಡಿದ್ದಾರೆ. ಕೊರಟಗೆರೆಯಲ್ಲಿ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ ಲಾಲ್ ತಿಳಿಸಿದರು.

ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಏರ್ಪಡಿಸಲಾಗಿದ್ದ ರೈತ ನಾಯಕ ಕುಮಾರಣ್ಣನ ಜೊತೆ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿಯ ವೀಡೀಯೊ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದ 224 ಕ್ಷೇತ್ರದ ರೈತರ ಸಂಕಷ್ಟ ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತ ನಾಯಕ ಕುಮಾರಣ್ಣ ಮುಖ್ಯಮಂತ್ರಿ. ಆದರೆ ರೈತರ ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿ ಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು.

ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿ ಬೆಳೆಯು ಕೊಚ್ಚಿ ಹೋಗಿದೆ. ರಾಗಿ ಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ ರಾಗಿ ಖರೀದಿ ಕೇಂದ್ರದ ಅವಶ್ಯಕತೆ ಇದೆ. ಸರಕಾರ ರಾಗಿ ಬೆಳೆಗೆ ಬೆಂಬಲ ಬೆಲೆಯ ಜೊತೆ ಆರ್ಥಿಕವಾಗಿ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪುರವರ ರೈತ ಗೋವರ್ಧನ್ ಮಾತನಾಡಿ, ಕೃಷಿ ಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿ ಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿ ಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆ ವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ಕೊರಟಗೆರೆ ರೈತರಿಗೆ ಲಕ್ಷಾಂತರ ರೂ. ಬೆಳೆ ನಷ್ಟವಾದ್ರು ಬೆಳೆ ವಿಮೆಯ ಹಣವೇ ಬರುತ್ತಿಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೊತ್ತಿಲ್ಲ ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿಪಂ ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!