ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಹಿಂದಿನ ವರ್ಷಗಳಲ್ಲಿ ಕೋಎಡ್- 19 ನಿಂದಾಗಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಪೂಜ್ಯರ ಸಂಸ್ಮರಣೋತ್ಸವ ದೊಡ್ಡ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸರ್ಕಾರವು ಹಿಂದಿನ ವರ್ಷ ಈ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿತು. ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ನಾಡಿನಾದ್ಯಂತ ಈ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ. ಜ. 21 ರ ಶನಿವಾರ ಬೆಳಗ್ಗೆ 10.30 ಗಂಟೆಗೆ ಸಮಾರಂಭವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಿದ್ಧಲಿಂಗ ಮಹಾ ಸಾಮೀಜಿಯವರ ನೇತೃತ್ವ, ಬೆಂಗಳೂರಿನ ಬೇಲಿಮಠದ ಅಧ್ಯಕ್ಷ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಸಚಿವರಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಎಸ್.ಡಿ.ಸೋಮಶೇಖರ್, ಸಿ.ಸಿ.ಪಾಟೀಲ್, ಬಿ.ಸಿ.ನಾಗೇಶ್ ಭಾಗವಹಿಸಲಿದ್ದಾರೆ.
ಕೇಂದ್ರ ಸಚಿವ ಭಗವಂತ ಕೂಬ, ಸಂಸದರಾದ ತೇಜಸ್ವಿ ಸೂರ್ಯ, ಜಿ.ಎಸ್.ಬಸವರಾಜು, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕೊರಟರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಚಿದಾನಂದ್ ಎಂ ಗೌಡ, ರಾಜೇಂದ್ರ ರಾಜಣ್ಣ, ಮೇಯರ್ ಪ್ರಭಾವತಿ ಸುಧೀಶ್ವರ್ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಜ.21 ರಂದು ಪೂಜ್ಯರ ಗದ್ದಿಗೆಗೆ ವಿಶೇಷ ಹೂವಿನ ಅಲಂಕಾರ ಹಾಗೂ ಬೆಳಗ್ಗೆ 5.30 ರಿಂದ ಮಹಾ ರುದ್ರಾಭಿಷೇಕ ಮತ್ತು ರಾಜೋಪಚಾರ, ಬಿಲ್ವಾರ್ಚನೆ ಹಾಗೂ ಇತರೆ ವಿಶೇಷ ಪೂಜಾ ಕೈಂಕರ್ಯ ಜರುಗಲಿವೆ. ಬೆ.8.00ಕ್ಕೆ ಬೆಳ್ಳಿ ರಥದಲ್ಲಿ ಪೂಜ್ಯರ ಪುತ್ಥಳಿಯಿಟ್ಟು ಮೆರವಣಿಗೆಯನ್ನು ಮಠದ ಆವರಣದಲ್ಲಿ ಹರಗುರು ಚರಮೂರ್ತಿಗಳ ಮತ್ತು ಭಕ್ತರ ಸಮ್ಮುಖದಲ್ಲಿ ನಡೆಸಲಾಗುವುದು.
Comments are closed.