ಜ. 21 ರಿಂದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

79

Get real time updates directly on you device, subscribe now.


ತುಮಕೂರು: ಬಿಜೆಪಿಯಿಂದ ನಡೆದ ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿದ್ದು, ಇದೀಗ 21 ರಿಂದ 29ರ ವರೆಗೆ ಬೂತ್ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಾಧನೆ ಹಾಗೂ ಹಮ್ಮಿಕೊಂಡಿರುವ ಯೋಜನೆ ಬಗ್ಗೆ ತಿಳಿಸಲಾಗುವುದು. ಅಲ್ಲದೆ ಮಿಸ್ ಕಾಲ್ ಕೊಡುವ ಮೂಲಕ ಸದಸ್ಯ ತತ್ವ ನೋಂದಣಿ ಕಾರ್ಯ ಕೂಡ ನಡೆಸಲಾಗುವುದು. ಜನವರಿ 29 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಭಾತ್ ಆಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಫಲಾನುಭವಿಗಳ ಸಂಪರ್ಕದ ಜೊತೆಗೆ ಪ್ರತಿ ಬೂತ್ ವ್ಯಾಪ್ತಿಯಲ್ಲಿ 10 ಗೋಡೆ ಬರಹ ಹಾಗೂ 1 ಡಿಜಿಟಲ್ ಗೋಡೆ ಬರಹ ಮಾಡಲಾಗುವುದು ಎಂದು ತಿಳಿಸಿದರು.

ಜ.21 ರಂದು ತುಮಕೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಬಿಜೆಪಿ ಸಚಿವರು, ಸಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಇನ್ನು ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕ್ರಮ ಜ. 20 ರಂದು ನಗರದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಸಿದ್ದಗಂಗಾ ಮಠದಿಂದ ರ್ಯಾಲಿ ಸಹ ಹಮ್ಮಿಕೊಳ್ಳಲಾಗಿದೆ ಎಂದು ರವಿಶಂಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಜ್ಯೋತಿಗಣೇಶ್, ಮುಖಂಡರಾದ ಎಂ.ಬಿ,ನಂದೀಶ್, ವೈ.ಹೆಚ್.ಹುಚ್ಚಯ್ಯ, ಮಹಿಳಾ ಮೋರ್ಷಾ ಅಧ್ಯಕ್ಷೆ ಅಂಬಿಕಾ, ಭೈರಪ್ಪ, ಸದಾಶಿವಯ್ಯ, ಮಹೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!